ಉಡುಪಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಉಡುಪಿ ಸಂತೆಕಟ್ಟೆ ಕೆಜಿ ರೋಡ್ ರಾಷ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಅಪಘಾತಕ್ಕೀಡಾಗಿದೆ. ಪರಿಣಾಮ ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಾವಲು ವಾಹನದ ಮುಂದೆ ಸಂಚರಿಸುತ್ತಿದ್ದ ಲಾರಿ ಸೂಚನೇ ನೀಡದೆ ತಿರುಗಿಸಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅದೃಷ್ಟವಶಾತ್ ಬೆಂಗಾವಲು ವಾಹನದಲ್ಲಿದ್ದ ಎಲ್ಲ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
ನಿಯಂತ್ರಣ ತಪ್ಪಿ ಪಲ್ಟಿಯಾದ ಸಚಿವ ಕೋಟ ಎಸ್ಕಾರ್ಟ್ ವಾಹನ






















