Homeಸುದ್ದಿಕುಮಾರಸ್ವಾಮಿಗೆ ಕೊರೋನ ಸೋಂಕು

Related Posts

ಕುಮಾರಸ್ವಾಮಿಗೆ ಕೊರೋನ ಸೋಂಕು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸ್ವತಃ ಕುಮಾರಸ್ವಾಮಿ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸ್ವಲ್ಪ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.
ವೈದ್ಯರ ಸೂಚನೆಯಂತೆ 10 ದಿನ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Latest Posts

error: Content is protected !!