Saturday, October 1, 2022
spot_img
Homeಸುದ್ದಿಆರ್‌ಎಸ್‌ಎಸ್‌ ಕಚೇರಿ ಮೇಲೆ ಬಾಂಬ್‌ ದಾಳಿ

ಆರ್‌ಎಸ್‌ಎಸ್‌ ಕಚೇರಿ ಮೇಲೆ ಬಾಂಬ್‌ ದಾಳಿ

ಪಯ್ಯನ್ನೂರು: ಕೇರಳದಲ್ಲಿ ಸ್ವಲ್ಪ ಸಮಯ ತಗ್ಗಿದ್ದ ರಾಜಕೀಯ ಹಿಂಸಾಚಾರ ಮತ್ತೆ ಶುರುವಾಗಿದೆ. ಸಿಪಿಎಂ ಮುಖ್ಯ ಕಚೇರಿಗೆ ಬಾಂಬ್‌ ದಾಳಿಯಾದ ಘಟನೆ ನೆನಪಿನಿಂದ ಮರೆಯಾಗುವ ಮೊದಲೇ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ಮೇಲೆ ಮಂಗಳವಾರ ನಸುಕಿನ ಬಾಂಬ್ ದಾಳಿ ನಡೆದಿದು ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.
ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಇಂದು ಬೆಳಗ್ಗೆ ಈ ದಾಳಿ ನಡೆದಿದೆ.
ಯಾರಿಗೂ ಗಾಯಗಳಾಗಿಲ್ಲ, ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಪಯ್ಯನ್ನೂರು ಪೊಲೀಸರು ತಿಳಿಸಿದ್ದಾರೆ. ಆರ್​ಎಸ್​ಎಸ್​ ಕಚೇರಿ ಮೇಲಿನ ದಾಳಿಯ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ ಟಾಮ್ ವಡಕ್ಕನ್, ಪೊಲೀಸರ ಕುಮ್ಮಕ್ಕು ತುಂಬಾ ಅಪಾಯಕಾರಿ. ಪೊಲೀಸ್ ಠಾಣೆ 100 ಮೀಟರ್ ದೂರದಲ್ಲಿದ್ದು, ಪೊಲೀಸರು ಕಣ್ಣುಮುಚ್ಚಿ ಕುಳಿತಿದ್ದಾರೆಯೇ? ಕಣ್ಣೂರಿನಂತಹ ಸೂಕ್ಷ್ಮ ಜಿಲ್ಲೆಯಲ್ಲಿ ಕಚೇರಿಗಳಿಗೆ ವಿಶೇಷವಾಗಿ ರಕ್ಷಣೆ ನೀಡಬೇಕು. ರಾಜ್ಯದಲ್ಲಿ ಯಾವುದೇ ರಾಜಕೀಯ ಕಚೇರಿಗೆ ಹಾನಿಯಾದರೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ಆರೋಪಿಸಿದ್ದಾರೆ.
ಮಧ್ಯರಾತ್ರಿ 1.30 ರ ಸುಮಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಪಯ್ಯನ್ನೂರಿನಲ್ಲಿರುವ ರಾಷ್ಟ್ರ ಭವನ ಎಂಬ ಆರ್‌ಎಸ್‌ಎಸ್ ಕಚೇರಿಯ ಮೇಲೆ ನಾಡ ಬಾಂಬ್ ಎಸೆದಿದ್ದಾರೆ ಎಂದು ತಿಳಿದುಬಂದಿದೆ.ಈ ಪ್ರದೇಶವು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆಯ ಇತಿಹಾಸವನ್ನು ಹೊಂದಿದೆ. 2010-2016ರ ನಡುವೆ ಈ ಪ್ರದೇಶದಲ್ಲಿ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಹಲವಾರು ದಾಳಿಗಳು ನಡೆದಿವೆ.
ಈ ದಾಳಿಯ ಹಿಂದೆ ಸಿಪಿಎಂ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಘಟನೆಯ ವೇಳೆ ಆರ್‌ಎಸ್‌ಎಸ್ ಕಚೇರಿಯಲ್ಲಿ ಬೆರಳೆಣಿಕೆಯಷ್ಟು ಜನರಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸರು ಬೆಳಗ್ಗೆ 6 ಗಂಟೆಗೆ ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!