Wednesday, August 17, 2022
spot_img
Homeಸುದ್ದಿಜು.21ರಂದು ಸೋನಿಯಾ ವಿಚಾರಣೆ: ಇ.ಡಿ. ಸಮನ್ಸ್‌ ಜಾರಿ

ಜು.21ರಂದು ಸೋನಿಯಾ ವಿಚಾರಣೆ: ಇ.ಡಿ. ಸಮನ್ಸ್‌ ಜಾರಿ

ಹೊಸದಿಲ್ಲಿ: ನ್ಯಾಶನಲ್‌ ಹೆರಾಲ್ಡ್‌ ಹಗರಣಕ್ಕೆ ಸಂಬಂಧಿಸಿದಂತೆ ಜು.21ರಂದು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಹೊಸದಾಗಿ ಸಮನ್ಸ್‌ ಜಾರಿ ಮಾಡಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಗೆ ವಿಚಾರಣೆಗೆ ಹಾಜರಾಗುವುದರಿಂದ ನಾಲ್ಕು ವಾರಗಳ ವಿನಾಯಿತಿ ನೀಡಲಾಗಿತ್ತು. ಅದು ಜು.22ಕ್ಕೆ ಕೊನೆಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಹೊಸ ಸಮನ್ಸ್‌ ಜಾರಿಗೊಳಿಸಲಾಗಿದೆ.
ಕೊರೋನ ಮತ್ತು ಶ್ವಾಸಕೋಶದ ಸೋಂಕಿಗೆ ಒಳಗಾಗಿರುವುದರಿಂದ ವಿಚಾರಣೆಯನ್ನು ಒಂದು ತಿಂಗಳು ಮುಂದೂಡಬೇಕೆಂದು ಸೋನಿಯಾ ಗಾಂಧಿ ವಿನಂತಿಸಿದ್ದರು. ಆ ಪ್ರಕಾರ ಜು.22ರ ತನಕ ವಿನಾಯಿತಿ ನೀಡಲಾಗಿತ್ತು.
ನ್ಯಾಶನಲ್‌ ಹೆರಾಲ್ಡ್‌ ಪತ್ರಿಕೆಗೆ ಸೇರಿದ 2,000 ಕೋ.ರೂ. ಆಸ್ತಿಯಲ್ಲಿ ಅವ್ಯವಹಾರ ನಡೆಸಿದ ಆರೋಪ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್‌ ಗಾಂಧಿ ಮೇಲಿದೆ. ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಈ ಹರಣವನ್ನು ಬಯಲಿಗೆಳೆದಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!