Homeಸುದ್ದಿಕಾರ್ಕಳ ತಾಲೂಕು ಮುಖ್ಯಶಿಕ್ಷಕರ ಕಾರ್ಯಾಗಾರ

Related Posts

ಕಾರ್ಕಳ ತಾಲೂಕು ಮುಖ್ಯಶಿಕ್ಷಕರ ಕಾರ್ಯಾಗಾರ

ಕಾರ್ಕಳ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಸ್ಥಳೀಯ ಸಂಸ್ಥೆ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಲ್ಲಿ ಕಾರ್ಕಳ ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯಶಿಕ್ಷಕರ ಸ್ಕೌಟ್ಸ್ ಗೈಡ್ಸ್ ಒಂದು ದಿನದ ಕಾರ್ಯಾಗಾರ ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಜರುಗಿತು.
ಅಧ್ಯಕ್ಷತೆಯನ್ನು ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಂ. ಕೆ. ವಿಜಯ್ಕುಮಾರ್ ವಹಿಸಿದ್ದರು. ಕಾರ್ಕಳ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಜಿ. ನಾಯಕ್ ಚಾಲನೆ ನೀಡಿದರು. ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ರವಿಚಂದ್ರ ಕಾರಂತ ಉಡುಪಿ, ಜಿಲ್ಲಾ ಗೈಡ್ಸ್‌ ಅಯುಕ್ತೆ ‌ಜ್ಯೋತಿ ಜೆ. ಪೈ , ಉಡುಪಿ ಜಿಲ್ಲಾ ಗೈಡ್ಸ್‌ ತರಬೇತು ಆಯುಕ್ತೆ ಸಾವಿತ್ರಿ ಮನೋಹರ್, ಉಡುಪಿ ಜಿಲ್ಲಾ ಸ್ಕೌಟ್ ತರಬೇತು ಆಯುಕ್ತ ಆನಂದ ಅಡಿಗ , ದಕ್ಷಿಣ ಕನ್ನಡ ಜಿಲ್ಲಾ ಸ್ಕೌಟ್ ತರಬೇತು ಆಯುಕ್ತ ಪ್ರತಿಮ್ ಕುಮಾರ್ , ರಾಜ್ಯ ಸಹ ಸಂಘಟಕ ಆಯುಕ್ತೆ ಸುಮನ ಶೇಖರ್, ಸ್ಥಳೀಯ ಸಂಸ್ಥೆ ಉಪಾಧ್ಯಕ್ಷ ಜಗದೀಶ್ ಹೆಗ್ಡೆ, ಕಾರ್ಕಳ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣ ಮೊಯಿಲಿ, ಅನುದಾನಿತ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ ಬಲ್ಲಾಳ, ಕಾರ್ಕಳ ಉಡುಪಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂಜೀವ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.
ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಶಾಲೆಗೆ ಸ್ಕೌಟ್ಸ್ ಗೈಡ್ಸ್ ಚಳವಳಿಗೆ ಕೀರ್ತಿ ತಂದ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಹಾರ, ಶಾಲು, ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು. ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಸ್ಕೌಟ್ ತರಬೇತಿ ಆಯುಕ್ತ ಪ್ರತಿಮ್ ಕುಮಾರ್ ರವರು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರವನ್ನು ಪ್ರಸ್ತುತ ಪಡಿಸಿದರು. ತಾಲೂಕಿನ ಪ್ರಾಥಮಿಕ ಹಾಗೂಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಗಣೇಶ್ ಜಾಲ್ಸೂರು ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ನವಿನ್ ಎ. , ಪ್ರಕಾಶ್ ಬೈಲೂರು, ಸೂರ್ಯ ತೆಳ್ಳಾರು ಸಹಕರಿಸಿದರು.

LEAVE A REPLY

Please enter your comment!
Please enter your name here

Latest Posts

error: Content is protected !!