Sunday, October 2, 2022
spot_img
Homeರಾಜ್ಯಮಹಾರಾಷ್ಟ್ರದಲ್ಲಿ ನಿಲ್ಲದ ಮಳೆ : ಪುಣೆ ಸೇರಿ ಹಲವೆಡೆ ರೆಡ್‌ ಅಲರ್ಟ್

ಮಹಾರಾಷ್ಟ್ರದಲ್ಲಿ ನಿಲ್ಲದ ಮಳೆ : ಪುಣೆ ಸೇರಿ ಹಲವೆಡೆ ರೆಡ್‌ ಅಲರ್ಟ್

ಮುಂಬೈ : ನೆರೆಯ ರಾಜ್ಯವಾದ ಮಹಾರಾಷ್ಟ್ರದಲ್ಲಿ ಇನ್ನೂ ಮಳೆಯ ಆರ್ಭಟ ಕಡಿಮೆಯಾಗಿಲ್ಲ. ಇಂದು ಮುಂಬೈ, ರಾಯಗಢ, ರತ್ನಗಿರಿ, ಸಿಂಧುದುರ್ಗ, ಕೊಲ್ಹಾಪುರ, ಸತಾರ, ಅಮರಾವತಿ ಮತ್ತು ಥಾಣೆಯಲ್ಲಿ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಪಾಲ್ಘರ್‌, ನಾಸಿಕ್‌ ಮತ್ತು ಪುಣೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಶಾಲಾ-ಕಾಲೇಜುಗಳಿಗೆ ಜು.16 ರವರೆಗೆ ರಜೆ ನೀಡಲಾಗಿದೆ. ನಾಗಾಪುರದಲ್ಲಿ ಜಿಲ್ಲಾಧಿಕಾರಿಗಳು ಸಮೀಕ್ಷೆ ನಡೆಸಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸಿಸುತ್ತಿರುವ ನಾಗರೀಕರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ ನಾಗ್ಪುರದಲ್ಲಿ 10 ಮಂದಿ ಸಾವನ್ನಪ್ಪಿದ್ದು 19 ಮಂದಿ ಗಾಯಗೊಂಡಿದ್ದಾರೆ. ನಾಸಿಕ್‌ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಗೋದಾವರಿ ನದಿಯ ದಂಡೆಯಲ್ಲಿರುವ ದೇವಾಲಯಗಳು ಮುಳುಗಿವೆ.

LEAVE A REPLY

Please enter your comment!
Please enter your name here

Most Popular

error: Content is protected !!