ಮೈಸೂರು : ಕೆಲವೊಮ್ಮೆ ಕ್ರೀಡೆಯಲ್ಲಿ ಎಷ್ಟೇ ತರಬೇತಿಯಿದ್ದರೂ, ಎದುರಿಗೆ ತರಬೇತುದಾರರು ಇದ್ದರೂ ಕೂಡ ಸ್ವಲ್ಪ ಎಚ್ಚರ ತಪ್ಪಿದರೂ ಪ್ರಾಣಕ್ಕೇ ಕುತ್ತು ಬರಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಮೈಸೂರಿನ ಹೊಸಕೇರಿ ನಿವಾಸಿ 23 ವರ್ಷದ ಯುವಕ ನಿಖಿಲ್ ಸುರೇಶ್ ಎದುರಾಳಿಯ ಒಂದೇ ಒಂದು ಏಟಿಗೆ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡಿ ಪ್ರಾಣ ಕಳೆದುಕೊಂಡಿದ್ದಾರೆ.
ಜು. 10 ರಂದು ಬೆಂಗಳೂರಿನ ಕೆಂಗೇರಿಯಲ್ಲಿ A-1 ಕಿಕ್ ಬಾಕ್ಸರ್ ಸಂಘಟನೆ ವತಿಯಿಂದ ಸ್ಪರ್ಧೆ ಆಯೋಜನೆಗೊಂಡಿತ್ತು. ಈ ವೇಳೆ ರಿಂಗ್‌ನಲ್ಲಿ ಸೆಣಸಾಡುತ್ತಿದ್ದಂತೆ ಎದುರಾಳಿಯ ಏಟಿಗೆ ನಿಖಿಲ್ ಗಂಭೀರ ಗಾಯಗೊಂಡಿದ್ದರು. ಎದುರಾಳಿ ತಲೆಗೆ ಹೊಡೆದ ಒಂದೇ ಏಟಿಗೆ ಬಾಕ್ಸಿಂಗ್ ರಿಂಗ್ ನಲ್ಲಿಯೇ ನಿಖಿಲ್ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎರಡು ದಿನಗಳ ಕಾಲ ಕೋಮಾದಲ್ಲಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಎದುರಾಳಿಯ ಪಂಚ್ – ಪ್ರಾಣವೇ ಕಳೆದುಕೊಂಡ ಕಿಕ್ ಬಾಕ್ಸರ್
