Saturday, October 1, 2022
spot_img
Homeಕ್ರೈಂಶಿವಮೊಗ್ಗ : ಮಾರಕಾಸ್ತ್ರಗಳಿಂದ ಕೊಚ್ಚಿ ಕುಖ್ಯಾತ ರೌಡಿಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆ

ಶಿವಮೊಗ್ಗ : ಮಾರಕಾಸ್ತ್ರಗಳಿಂದ ಕೊಚ್ಚಿ ಕುಖ್ಯಾತ ರೌಡಿಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆ

ಶಿವಮೊಗ್ಗ : ಲವ ಹಾಗೂ ಕುಶನನ್ನು ಹತ್ಯೆ ಮಾಡಿ ಭೂಗತ ಲೋಕಕ್ಕೆ ಕಾಲಿಟ್ಟಿದ್ದ ಹಂದಿ ಅಣ್ಣಿಯನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಇನ್ನೋವಾ ಕಾರಿನಲ್ಲಿ ಬಂದ ಆರೇಳು ಜನರ ತಂಡ ವಿನೋಬನಗರ ಚೌಕಿ ಬಳಿ ರೌಡಿಶೀಟರ್ ಹಂದಿ ಅಣ್ಣಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ. ತಲೆ ಭಾಗಕ್ಕೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಹಂದಿ ಅಣ್ಣಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!