ಬೆಂಗಳೂರು : ಐದು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ 300ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲಿದೆ. ನಟ ಅನಂತ್‌ನಾಗ್ ಅವರ ಜೊತೆಗೆ ಶಹನಾಯಿ ವಾದಕ ಪಂಡಿತ್ ಬಾಳೇಶ ಭಜಂತ್ರಿ ಹಾಗೂ ಎಂಜಿನಿಯರ್ ಶರದ್ ಶರ್ಮ ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ನಗರ ಹೊರವಲಯದ ನಂದಿನಿ ಪ್ಯಾಲೇಸ್‍ನಲ್ಲಿ ಇಂದು ವಿಶ್ವವಿದ್ಯಾಲಯದ 2ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಹಾಗೂ ಪದಪ್ರದಾನ ಮಾಡಲಿದ್ದಾರೆ ಎಂದು ವಿಶ್ವವಿದ್ಯಾಲಯ ಕುಲಪತಿ ಪ್ರೊ. ನಿರಂಜನ ವಾನಳ್ಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹಿರಿಯ ನಟ ಅನಂತ್‌ನಾಗ್, ಸೇರಿದಂತೆ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್
