ಕಾರ್ಕಳ : ಹಿರ್ಗಾನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜು.16ರಂದು ನಡೆಯಲಿದ್ದ ಜಿಲ್ಲಾಧಿಕಾರಿ, ತಹಶೀಲ್ದಾರ ಮತ್ತು ಕಂದಾಯ ಅಧಿಕಾರಿಗಳ ಗ್ರಾಮ ವಾಸ್ತವ್ಯ ಮುಂದೂಡಲಾಗಿದೆ. ಭಾರಿ ಮಳೆಯಿರುವ ಹಿನ್ನೆಲೆಯಿಂದಾಗಿ ಗ್ರಾಮ ವಾಸ್ತವ್ಯವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಶನಿವಾರ ಬೆಳಗ್ಗೆ 10ರಿಂದ ಹಿರ್ಗಾನ ವ್ಯವಸಾಯ ಸೇವಾ ಸಹಕಾರಿ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ನಡೆಯಬೇಕಾಗಿತ್ತು.