Sunday, October 2, 2022
spot_img
Homeಜಿಲ್ಲಾಉಡುಪಿ ಜಿಲ್ಲೆಗೆ 100 ಬೆಡ್‌ಗಳ ಇಎಸ್‌ಐ ಆಸ್ಪತ್ರೆ ಮಂಜೂರು

ಉಡುಪಿ ಜಿಲ್ಲೆಗೆ 100 ಬೆಡ್‌ಗಳ ಇಎಸ್‌ಐ ಆಸ್ಪತ್ರೆ ಮಂಜೂರು

ಉಡುಪಿ : ಕೇಂದ್ರ ಕಾರ್ಮಿಕ ಸಚಿವಾಲಯ ದೇಶದಾದ್ಯಂತ 23 ನೂತನ ಇಎಸ್‌ಐ ಆಸ್ಪತ್ರೆಗಳನ್ನು ಮಂಜೂರು ಮಾಡಿದ್ದು, ಕರ್ನಾಟಕದಲ್ಲಿ ಉಡುಪಿ ಹಾಗೂ ತುಮಕೂರು ಜಿಲ್ಲೆಗಳಿಗೆ 100 ಬೆಡ್ ಸಾಮರ್ಥ್ಯದ ಇಎಸ್‌ಐ ಆಸ್ಪತ್ರೆಗಳ ನಿರ್ಮಾಣಕ್ಕೆ ತಾತ್ವಿಕ ಅನುಮೋದನೆಯನ್ನು ಕೇಂದ್ರ ಸರಕಾರ ನೀಡಿದೆ. ಕರಾವಳಿಯ ಜನತೆಯ ಬಹುದಿನಗಳ ಬೇಡಿಕೆಯಾದ ಇಎಸ್‌ಐ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಈ ಹಿಂದೆ ಒತ್ತಾಯಿಸಿದ್ದರು. ಈ ಕುರಿತು ಕೇಂದ್ರ ಕಾರ್ಮಿಕ ಸಚಿವ ಭೂಪೆಂದ್ರ ಯಾದವ್ ಅವರನ್ನು ಕೂಡ ಭೇಟಿಯಾಗಿ ಚರ್ಚಿಸಿ, ಉಡುಪಿಗೆ ಇಎಸ್‌ಐ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ವಿನಂತಿಸಿಕೊಂಡಿದ್ದರು. ಇದರ ಪರಿಣಾಮವಾಗಿ ಇಎಸ್‌ಐ ತನ್ನ 188 ನೇ ಸಾಮಾನ್ಯ ಸಭೆಯಲ್ಲಿ ಉಡುಪಿ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here

Most Popular

error: Content is protected !!