ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್‌ : ಸಚಿವ ಸುನೀಲ್ ಕುಮಾರ್‌ಗೆ ಒಲಿದ ಅದೃಷ್ಟ

ಬೆಂಗಳೂರು: ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್ ಆಗಿದ್ದು, ಸಚಿವ ಸುನೀಲ್ ಕುಮಾರ್ ಅವರಿಗೆ ಅದೃಷ್ಟ ಒಲಿದು ಬಂದಿದೆ. ನಳಿನ್ ಕುಮಾರ್ ಕಟೀಲ್‌ ಅವರ ಅಧಿಕಾರಾವಧಿ ಆಗಸ್ಟ್ ತಿಂಗಳಿನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಬಿಜೆಪಿ ಚಿಂತನ ಮಂಥನ ಸಭೆಯಲ್ಲಿ ಸುನೀಲ್ ಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬೆಕು ಎಂದು ತೀರ್ಮಾನಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

error: Content is protected !!
Scroll to Top