ವಿಶ್ವಕರ್ಮರ ಬೇಡಿಕೆ ಈಡೇರಿಸಲು ಬದ್ಧ : ಸಿಎಂ ಬೊಮ್ಮಾಯಿ

ಬೆಂಗಳೂರು : ವಿಶ್ವಕರ್ಮ ಸಮಾಜದ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಅವರು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ವತಿಯಿಂದ ಜು.15 ರಂದು ಜರುಗಿದ ವಿಶ್ವಕರ್ಮ ಸಮಾಜ ಮುಖಂಡರ ರಾಜ್ಯಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದ ಸಮಸ್ಯೆಗಳನ್ನು ನಿವಾರಣೆ ಮಾಡಲು ಹಲವು ನಾಯಕರು ಭರವಸೆ ನೀಡಿದ್ದಾರೆಯೆ ಹೊರತು ಈಡೇರಿಸುವ ಕೆಲಸ ಮಾಡಿಲ್ಲ. ಕೇವಲ ಆಶ್ವಾಸನೆಗಳನ್ನು ನೀಡುತ್ತಾ ಬಂದಿರುತ್ತಾರೆ. ಇನ್ನು ಮುಂದೆ ಹೀಗೆ ಆಗೋಲ್ಲ ಎಂದು ಬೊಮ್ಮಾಯಿ ತಿಳಿಸಿದರು.

ಬಹುದಿನಗಳ ಬೇಡಿಕೆಯಾದ ಸಮುದಾಯದ ಕುಲಶಾಸ್ತ್ರ ಅಧ್ಯಯನ ನಡೆಸಲು ಸರಕಾರ ಮುಂದಾಗಿದ್ದು, ಶೀಘ್ರ ಆದೇಶ ಹೊರಡಿಸಲಾಗುವುದು ಎಂದರು. ಪಂಚ ಕುಲಕಸುಬುಗಳ ಸ್ಥಿತಿಗತಿ, ಅವುಗಳ ಆಧುನೀಕರಣ ಕುರಿತಂತೆ ವಿಶ್ವಕರ್ಮ ಸಂಸ್ಥೆ ರಚಿಸಲಾಗುವುದು. ಚಿತ್ರಕಾಲಾ ಪರಿಷತ್ತಿನ ಮಾದರಿಯಲ್ಲಿ ಪಠ್ಯಕ್ರಮವನ್ನು ರಚಿಸಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಅದನ್ನು ಅಭಿವೃದ್ಧಿ ಪಡಿಸಲಾಗುವುದು. ವಿಶ್ವಕರ್ಮ ಅಭಿವೃದ್ಧಿ ನಿಗಮದಲ್ಲಿ ಬಾಕಿ ಇರುವ ರೂ. 82 ಕೋಟಿ ಸಾಲ ಮನ್ನಾ ಮಾಡುವ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಮಾತನಾಡಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.













































































































































































error: Content is protected !!
Scroll to Top