Sunday, October 2, 2022
spot_img
Homeಕ್ರೈಂವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದು ಬಾಲಕಿ ಸಾವು

ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದು ಬಾಲಕಿ ಸಾವು

ಧಾರವಾಡ : ವಿದ್ಯುತ್ ತಂತಿ ಬಿದ್ದು 12 ವರ್ಷದ ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಕಲಘಟಗಿ ತಾಲೂಕಿನ ಪರಸಾಪುರ ಗ್ರಾಮದಲ್ಲಿ ನಡೆದಿದೆ. ಸಿಮ್ರಾನ್ ಬಾನು ಬಡಿಗೇರ್ ಮೃತ ದುರ್ದೈವಿ. ಮನೆ ಮುಂದೆ ಪಾತ್ರೆ ತೊಳೆಯುತ್ತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಆಕೆಯ ಮೇಲೆ ಬಿದ್ದಿದೆ. ಕೂಡಲೇ ಆಕೆ ಓಡಿ ಹೋಗಲು ಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
2019ರಲ್ಲಿ ತೂಗಾಡುತ್ತಿರುವ ವಿದ್ಯುತ್ ತಂತಿ ತಗುಲಿ ತಮ್ಮ ಹೊಲಗಳಲ್ಲಿ ಮೂವರು ಮೃತಪಟ್ಟಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಲಘಟಗಿ ನಿವಾಸಿಯೊಬ್ಬರು ಆರೋಪಿಸಿದ್ದಾರೆ. ಪ್ರತಿ ವರ್ಷವೂ ಇದೇ ಕಾರಣಕ್ಕೆ ಸಾವುಗಳಾಗುತ್ತಿದ್ದರು ಸಂಬಂಧಿಸಿದ ಹೆಸ್ಕಾಂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸದಿರುವುದು ದೌರ್ಭಾಗ್ಯವಾಗಿದೆ ಎಂದರು. ಹೊಸ ವಿದ್ಯುತ್ ಕೇಬಲ್‌ಗಳನ್ನು ಅಳವಡಿಸಿದ ನಂತರ ಅಧಿಕಾರಿಗಳು ಕಾಮಗಾರಿಯನ್ನು ಪರಿಶೀಲಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ. ವಿದ್ಯುತ್ ತಂತಿ ಮತ್ತು ಕಂಬಗಳ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರು ಹೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಅವರು ಗಮನ ಹರಿಸುತ್ತಿಲ್ಲ, ಹೀಗಾಗಿ ಇಂತ ದುರ್ಘಟನೆಗಳು ಸಂಭವಿಸುತ್ತಿವೆ ಎಂದು ದೂರಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!