ಬೆಂಗಳೂರು: ಅತಿವೃಷ್ಟಿಯಿಂದ ಬೆಳೆ ನಷ್ಟಕ್ಕೆ ನೀಡುವ ಪರಿಹಾರದ ಮೊತ್ತವನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಮಳೆಯಾಶ್ರಿತ ಪ್ರದೇಶದ ಬೆಳೆಗಳಿಗೆ ಪ್ರತಿ ಹೆಕ್ಟೇರ್ಗೆ 6,800 ರೂ.ನಿಂದ 13,600 ರೂ.ಗೆ, ನೀರಾವರಿ ಬೆಳೆಗಳಿಗೆ 13,500 ರೂ.ನಿಂದ 25,000 ರೂ.ಗೆ, ಬಹುವಾರ್ಷಿಕ ಬೆಳೆಗಳಿಗೆ 18,000 ರೂ.ನಿಂದ 28,000 ರೂ.ಗೆ ಹೆಚ್ಚಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ನಿಧಿ ಮತ್ತು ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯ ನಿಯಮಗಳ ಪ್ರಕಾರ ರಾಜ್ಯ ಸರಕಾರ ಪರಿಹಾರದ ಮೊತ್ತವನ್ನು ಹೆಚ್ಚಿಸಿದೆ. ಸರಕಾರದ ಆದೇಶದಂತೆ ಜೂ. 1ರಿಂದ ಡಿ. 31ರವರೆಗೆ ಮಳೆ ಮತ್ತು ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಗರಿಷ್ಠ ಎರಡು ಹೆಕ್ಟೇರ್ಗೆ ಪರಿಹಾರ ನೀಡಲಾಗುವುದು. ಬೆಳೆ ನಷ್ಟದ ಕುರಿತು ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
Recent Comments
ಕಗ್ಗದ ಸಂದೇಶ
on