Saturday, October 1, 2022
spot_img
Homeಸುದ್ದಿಜಗದೀಪ್‌ ಧನಕರ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ

ಜಗದೀಪ್‌ ಧನಕರ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ

ನವದೆಹಲಿ : ಉಪ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಬಿಜೆಪಿ ಸಂಸದೀಯ ಸಭೆಯ ಬಳಿಕ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳಲಿದ್ದು, ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದೆ. ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ.

LEAVE A REPLY

Please enter your comment!
Please enter your name here

Most Popular

error: Content is protected !!