*ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆ ಸಮೀಪ ನಡೆದ ಘಟನೆ
ಮಂಗಳೂರು: ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಕುಖ್ಯಾತ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಅವನ ಪ್ರಯತ್ನವನ್ನು ವಿಫಲಗೊಳಿಸಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. 15ಕ್ಕೂ ಹೆಚ್ಚು ಪ್ರಕರಣಗಳ ಆರೋಪಿ ಮುಕ್ತರ್ ಎಂಬಾತ ಪೊಲೀಸರು ಗುಂಡೇಟು ತಿಂದು ಗಾಯಗೊಂಡಿರುವ ಆರೋಪಿ. ಕೊಣಾಜೆ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಈ ಘಟನೆ ಸಂಭವಿಸಿದೆ.
ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮುಕ್ತರ್ ಐದು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ. ಇತ್ತೀಚೆಗೆ ಪ್ರಕರಣವೊಂದಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ಅವನನ್ನು ಬಂಧಿಸಿದ್ದರು. ಈ ಪ್ರಕರಣದ ಸ್ಥಳ ಮಹಜರಿಗೆ ಕೊಣಾಜೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಮುಕ್ತರ್ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆಗ ಪೊಲೀಸರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಬಳಿಕ ಕಾಲಿಗೆ ಗುರಿಯಿಟ್ಟಿದ್ದಾರೆ. ಆದರೆ ಈ ಸಂದರ್ಭದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ.
ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು
Recent Comments
ಕಗ್ಗದ ಸಂದೇಶ
on