ಹೊಸದಿಲ್ಲಿ: ಭಾರತದ ವಿಮಾನವೊಂದು ಪಾಕಿಸ್ಥಾನದ ಕರಾಚಿಯಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ಶಾರ್ಜಾದಿಂದ ಹೈದರಾಬಾದ್ಗೆ ಬರುತ್ತಿದ್ದ ಇಂಡಿಗೊ ವಿಮಾನ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ತುರ್ತಾಗಿ ಕರಾಚಿ ವಿಮಾನ ನಿಲ್ದಾಣದಲ್ಲಿ ಇಳಿದಿದೆ. ವಿಮಾನದಲ್ಲಿರುವ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಾರುತ್ತಿರುವ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಾಗ ಪೈಲೆಟ್ ಮುನ್ನೆಚ್ಚರಿಕೆ ಕ್ರಮವಾಗಿ ಕರಾಚಿಯಲ್ಲಿ ಲ್ಯಾಂಡ್ ಆಗಲು ಅನುಮತಿ ಕೇಳಿದ್ದರು. ಕರಾಚಿ ನಿಲ್ದಾಣದಿಂದ ಅನುಮತಿ ಸಿಕ್ಕಿದ ಕೂಡಲೇ ಲ್ಯಾಂಡ್ ಮಾಡಲಾಗಿದೆ. ಪ್ರಯಾಣಿಕರನ್ನು ಕರೆತರಲು ಇಂಡಿಗೊ ಬದಲಿ ವಿಮಾನದ ವ್ಯವಸ್ಥೆ ಮಾಡಲಿದೆ. ಕೆಲ ದಿನಗಳ ಹಿಂದೆ ದಿಲ್ಲಿಯಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನ ಕೂಡ ಇದೇ ರೀತಿ ತಾಂತ್ರಿಕ ದೋಷ ಕಾಣಿಸಿಕೊಂಡು ಕರಾಚಿಯಲ್ಲಿ ತುರ್ತು ಲ್ಯಾಂಡ್ ಆಗಿತ್ತು.
ಕರಾಚಿಯಲ್ಲಿ ಲ್ಯಾಂಡ್ ಆದ ಭಾರತದ ವಿಮಾನ
Recent Comments
ಕಗ್ಗದ ಸಂದೇಶ
on