Saturday, October 1, 2022
spot_img
Homeಜಿಲ್ಲಾನೆರೆ ಪರಿಹಾರದ ಹಣ ದುರುಪಯೋಗ ಆಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ : ಸಚಿವ ಕೋಟ ಶ್ರೀನಿವಾಸ...

ನೆರೆ ಪರಿಹಾರದ ಹಣ ದುರುಪಯೋಗ ಆಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉತ್ತರ ಕನ್ನಡ : ಸರಕಾರದಿಂದ ನೆರೆ ಪರಿಹಾರಕ್ಕೆ ನೀಡಿರುವ ಹಣ ದುರುಪಯೋಗವಾಗದಂತೆ ನೋಡಿಕೊಳ್ಳುವಂತೆ ಸ್ಥಳೀಯ ನೋಡಲ್‌ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮಳೆಯಿಂದಾಗಿ ಅಪಾರ ನಷ್ಟಗಳು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರಿಹಾರ ಒದಗಿಸಿಕೊಡುವಲ್ಲಿ ಸಹಕರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಅವರು ತಾಲೂಕು ಆಡಳಿತ ಸೌಧದಲ್ಲಿ ಹೊನ್ನಾವರ, ಭಟ್ಕಳದ ನೋಡಲ್‌ ಅಧಿಕಾರಿಗಳು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ನೆರೆ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ವಿಪರೀತ ಮಳೆ ಸುರಿಯುತ್ತಿರುವುದರಿಂದ ಎಲ್ಲೆಡೆ ಹಾನಿ ಸಂಭವಿಸಿದೆ. ಹೀಗಾಗಿ ಮಳೆ ಮುಗಿಯುವ ತನಕ ಅಧಿಕಾರಿಗಳಿಗೆ, ಸಿಬ್ಬಂದಿಗೆ ಯಾವುದೇ ರಜೆ ಇಲ್ಲ, ಸಿಬ್ಬಂದಿಯು ಹಾನಿಯ ಕುರಿತು ಎಲ್ಲೆಡೆ ತೀವ್ರ ನಿಗಾ ಇಡಬೇಕು. ಮಳೆಹಾನಿಗೆ ಸ್ಪಂದಿಸದೇ ಇರುವುದು, ಪರಿಹಾರ ವಿತರಣೆ ವ್ಯತ್ಯಯ ಸೇರಿದಂತೆ ಸಾರ್ವಜನಿಕರಿಂದ ಯಾವುದೇ ರೀತಿಯ ದೂರು ಬಂದರೂ ಸಂಬಂಧ ಪಟ್ಟ ಅಧಿಕಾರಿಗಳನ್ನೆ ಹೊಣೆ ಮಾಡಲಾಗುವುದು ಎಂದರು.

LEAVE A REPLY

Please enter your comment!
Please enter your name here

Most Popular

error: Content is protected !!