ಸಿಂಗಾಪುರ : ಭಾರತದ ಆಟಗಾರ್ತಿ ಪಿ. ವಿ. ಸಿಂಧು ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಚೀನಾದ ವಾಂಗ್ ಝೀ ಯಿ ಅವರ ವಿರುದ್ಧ ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದಾರೆ. ಜು. 16 ರಂದು ಜರುಗಿದ ಸೆಮಿಫೈನಲ್ ಪಂದ್ಯದಲ್ಲಿ ಜಪಾನಿನ ಸೇನಾ ಕವಾಕಮಿ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ್ದರು. ಇಂದು ನಡೆದ ಸೆಣಸಾಟದಲ್ಲಿ ಚೀನಾದ ಆಟಗಾರ್ತಿ ವಿರುದ್ಧ 21-9, 11-21, 21-15 ಅಂತರದಲ್ಲಿ ಜಯ ಸಾಧಿಸಿದರು. ಅವರು ಸಿಂಗಾಪುರ ಓಪನ್ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯ ಮಹಿಳಾ ಶಟ್ಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.