ಬೆಂಗಳೂರು: ಹಾವೇರಿ ಜಿಲ್ಲೆಯ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ| ಸಿ.ಟಿ.ಗುರುಪ್ರಸಾದ್ ಅವರ ಪತ್ನಿ ಎಚ್.ಕೆ.ಚೈತ್ರಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಜ್ಞಾನಭಾರತಿ ಬಡಾವಣೆಯ ಕದಂಬ ಏರಿಯಾದಲ್ಲಿರುವ ಮನೆಯಲ್ಲಿ ನಿನ್ನೆ ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರ ಸಹೋದರ ಡಾ. ಶರತ್ಬಾಬು ಅವರು ಈ ಕುರಿತು ದೂರು ನೀಡಿದ ಬಳಿಕ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.
23 ವರ್ಷದ ಹಿಂದೆ ಅವರ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಗುರುಪ್ರಸಾದ್ ಹಾವೇರಿಯಲ್ಲಿದ್ದರೂ ಅವರ ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿತ್ತು.
ಚೈತ್ರಾ ಬರೆದಿಟ್ಟಿರುವ ಪತ್ರ ಪೊಲೀಸರಿಗೆ ಸಿಕ್ಕಿದೆ. ಅದರಲ್ಲಿ ಆರೋಗ್ಯ ಸರಿಯಿಲ್ಲದಿರುವುದರಿಂದ ಸಾವಿಗೆ ಶರಣಾಗುತ್ತಿರುವುದಾಗಿ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
