ಬಡವರಿಗೆ ಹಕ್ಕುಪತ್ರ ನೀಡಲು ಕಾರ್ಕಳ ಕಾಂಗ್ರೆಸ್ ವಿರೋಧ – ಬಿಜೆಪಿ ಖಂಡನೆ

ಕಾರ್ಕಳ : ಸಚಿವ ವಿ. ಸುನೀಲ್‌ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದಾದ್ಯಂತ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವಲ್ಲಿ ಪ್ರಯತ್ನಿಸಿದ್ದಲ್ಲಿ ಕಾಂಗ್ರೆಸ್ ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಮನೆ ಮಾಡಿಕೊಂಡವರಿಗೆ ಹಕ್ಕು ಪತ್ರ ನೀಡದಂತೆ ಕಂದಾಯ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದೆ. ಇದು ಖಂಡನೀಯವೆಂದು ಭಾರತೀಯ ಜನತಾ ಪಾರ್ಟಿ ಪ್ರಕಟನೆಯಲ್ಲಿ ತಿಳಿಸಿದೆ.

1999-2000 ಇಸವಿಯಲ್ಲಿ ಕಾಂಗ್ರೆಸ್ ಸರಕಾರವಿದ್ದಾಗ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಸುಪ್ರೀಂ ಕೋರ್ಟ್‍ನಲ್ಲಿ ಅಫಿಡಾವಿಟ್ ಸಲ್ಲಿಸದೇ ಇದ್ದ ಕಾರಣ ಸಮಸ್ಯೆಯುಂಟಾಗಿದೆ. ಬಡವರಿಗೆ ಹಕ್ಕು ಪತ್ರ ಸಿಗಬೇಕೆಂಬ ಏಕೈಕ ಉದ್ದೇಶದಿಂದ ರಾಜ್ಯ ಬಿಜೆಪಿ ಸರಕಾರವು ಈ ಹಿಂದೆ ಕಾಂಗ್ರೆಸ್ ಮಾಡಿದ ತಪ್ಪು ನಿರ್ಧಾರಗಳನ್ನು ಸರಿಪಡಿಸಿ ಹಕ್ಕುಪತ್ರ ನೀಡುತ್ತಿದೆ. ಸಚಿವ ಸುನಿಲ್ ಕುಮಾರ್ ಅವರ ಸತತ ಪ್ರಯತ್ನದಿಂದಾಗಿ ಇದು ಸಾ‍ಧ್ಯವಾಗಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top