Saturday, October 1, 2022
spot_img
Homeಸುದ್ದಿಸೋನಿಯಾ ವಿಚಾರಣೆ ವಿರೋಧಿಸಿ ಕಾಂಗ್ರೆಸ್‌ನಿಂದ ನಾಳೆ ರಾಜಭವನ ಮುತ್ತಿಗೆ

ಸೋನಿಯಾ ವಿಚಾರಣೆ ವಿರೋಧಿಸಿ ಕಾಂಗ್ರೆಸ್‌ನಿಂದ ನಾಳೆ ರಾಜಭವನ ಮುತ್ತಿಗೆ

ಬೆಂಗಳೂರು: ಜಾರಿ ನಿರ್ದೇಶನಾಲಯ (ಇ.ಡಿ.) ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.21ರಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ವಿಚಾರಣೆಗೊಳಪಡಿಸುವುದನ್ನು ವಿರೋಧಿಸಿ ಕಾಂಗ್ರೆಸ್‌ ಬೆಂಗಳೂರಿನಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಿ ರಾಜ ಭವನಕ್ಕೆ ಮುತ್ತಿಗೆ ಹಾಕಲಿದೆ.
ಇ.ಡಿ.ಯ ಮೂಲಕ ಕೇಂದ್ರ ಸರ್ಕಾರ ಕಾಂಗ್ರೆಸ್‌ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ. ಇದನ್ನು ಖಂಡಿಸಿ ಜು.21ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಜಾಥಾ ಹಾಗೂ ‘ರಾಜಭವನ ಮುತ್ತಿಗೆ’ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
ಸೋನಿಯಾ ಗಾಂಧಿ ಅವರಿಗೆ ಧೈರ್ಯ ತುಂಬಲು ಜು.21 ರಂದು ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಜು.21ರಂದು ಎಲ್ಲಾ ನಾಯಕರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೇರಿ ಅಲ್ಲಿಂದ ‘ರಾಜಭವನ ಚಲೋ’ ನಡೆಸಲಾಗುವುದು ಎಂದರು.
ನಾವು ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೇ ಇಲ್ಲ. ಫ್ರೀಡಂ ಪಾರ್ಕ್​ನಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ಜು.22ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗುವುದು. ಸೋನಿಯಾ ಗಾಂಧಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸು ಮುಗಿದ ಅಧ್ಯಾಯ; ಸತತ 54 ಗಂಟೆ ವಿಚಾರಣೆ ನಡೆಸುವ ಅಗತ್ಯವೇನಿದೆ: ಸಿದ್ದರಾಮಯ್ಯ
ಈ ಪ್ರಕರಣಕ್ಕೆ ಸಂಬಂಧಿಸಿ ಕಳೆದ ತಿಂಗಳು ಐದು ದಿನ ರಾಹುಲ್‌ ಗಾಂಧಿಗೆ ವಿಚಾರಣೆ ಹೆಸರಿನಲ್ಲಿ ಕಿರುಕುಳ ನೀಡಲಾಯಿತು. ಇ.ಡಿ. ದುರ್ಬಳಕೆ ಮಾಡಿಕೊಂಡು ನಮ್ಮ ಪಕ್ಷ ಹಾಗೂ ನಾಯಕರ ಘನತೆಗೆ ಕಪ್ಪು ಚುಕ್ಕೆ ಇಡುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಬಲ ಸಂದೇಶ ರವಾನಿಸಬೇಕು ಎಂದು ಹೇಳಿದರು.

LEAVE A REPLY

Please enter your comment!
Please enter your name here

Most Popular

error: Content is protected !!