ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ವಿರುದ್ಧ ಕಾಂಗ್ರೆಸ್‌ ದೂರು

ಬೆಂಗಳೂರು:ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ವಿರುದ್ಧವೇ ಕರ್ನಾಟಕ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ಚುನಾವಣೆಯಲ್ಲಿ ಅಕ್ರಮ ಎಸಗಿದ ದೂರು ದಾಖಲಿಸಿದೆ.
ಜು.18ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು, ರಾಜ್ಯದ ಮುಖ್ಯಮಂತ್ರಿ, ಸಚಿವರು , ಶಾಸಕರು ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಕಾಂಗ್ರೆಸ್‌ ದೂರಿನಲ್ಲಿ ಆರೋಪಿಸಿದೆ.
ಬಿಜೆಪಿ ರಾಷ್ಟ್ರಪತಿ ಚುನಾವಣೆಗೆ ಮುಂಚಿತವಾಗಿ ಎಲ್ಲ ಶಾಸಕರನ್ನು ಖಾಸಗಿ ಹೋಟೆಲ್‌ನಲ್ಲಿ ಇರಿಸಿ ಆಹಾರ, ಪಾನೀಯ ನೀಡಿ, ಮನರಂಜನೆಗೆ ವ್ಯವಸ್ಥೆ ಮಾಡಿತ್ತು.ಇದರ ವೆಚ್ವನ್ನು ಮುಖ್ಯಮಂತ್ರಿ ಮತ್ತು ಬಿಜೆಪಿ ವಹಿಸಿಕೊಂಡಿದೆ.ಈ ಮೂಲಕ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಸುವ ಆಶಯ ಮತ್ತು ನಿಯಮಕ್ಕೆ ಬಿಜೆಪಿ ದ್ರೋಹ ಬಗೆದಿದೆ ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌. ಉಗ್ರಪ್ಪ ಹೇಳಿದ್ದಾರೆ. ಅಭ್ಯರ್ಥಿ ಮುರ್ಮು ಅವರಿಗೆ ಅರಿವಿದ್ದೇ ಬಿಜೆಪಿ ಈ ಚುನಾವಣಾ ಅಕ್ರಮ ಎಸಗಿದೆ. ಹೀಗಾಗಿ ಅವರನ್ನು ದೂರಿನಲ್ಲಿ ಹೆಸರಿಸಿದ್ದೇವೆ ಎಂದು ತಿಳಿಸಿದ್ದಾರೆ.





























































































































































































































error: Content is protected !!
Scroll to Top