ಕಾರ್ಕಳ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುಮಾ ಅವರು ತಮ್ಮ ಪ್ರಥಮ ಪ್ರಯತ್ನದಲ್ಲೇ ಇನ್ಸ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ನಡೆಸುವ ರಾಷ್ಟ್ರ ಮಟ್ಟದ ಸಿ.ಎಸ್. ಫೌಂಡೇಶನ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕ್ರಿಯೇಟಿವ್ ಕಾಲೇಜಿನ ಮೊದಲ ವರ್ಷದ ಸಿ.ಎಸ್. ಫಲಿತಾಂಶದಲ್ಲಿಯೇ ಸುಮಾ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ತನ್ನ ಪ್ರಾರಂಭದ ಹಂತದಿಂದಲೇ ಸಿ.ಎ. ಫೌಂಡೇಶನ್ ಮತ್ತು ಸಿ.ಎಸ್. ಅರ್ಹತಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ತರಬೇತಿಗೊಳಿಸುತ್ತಿದ್ದು, ಕಳೆದ ವರ್ಷ ಈ ಸಂಸ್ಥೆಯ ಅಂಗ ಸಂಸ್ಥೆ ಹೆಚ್ ಕೆ ಎಸ್ ಪದವಿ ಪೂರ್ವ ಕಾಲೇಜು, ಹಾಸನ ಇಲ್ಲಿನ ನಾಲ್ವರು ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು.
Recent Comments
ಕಗ್ಗದ ಸಂದೇಶ
on