ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್ : ಕಾಂಗ್ರೆಸ್ ಆಕ್ರೋಶ

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಅಂತಿಮ ವರದಿಯನ್ನು ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ ನಡೆಸಿಲ್ಲ. ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ತನಿಖೆ ನಡೆಸಿರುವ ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಈಶ್ವರಪ್ಪ ಅವರಿಗೆ ಕ್ಲೀನ್‌ ಚಿಟ್‌ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಈಶ್ವರಪ್ಪ ಕೇಸ್ ಕ್ಲೋಸ್ ಮಾಡಿದ್ದಾರೆ. ಇದೊಂದು ದುರ್ದೈವದ ಸಂಗತಿ. ಮಾಜಿ ಸಚಿವರ ವಿರುದ್ಧ ಸಂತೋಷ್ ಪಾಟೀಲ್‌ ನೇರ ಆರೋಪ ಮಾಡಿದ್ದರು. ಸಾವಿಗೆ ಕಾರಣ ಈಶ್ವರಪ್ಪ ಅಂತ ಹೇಳಿದ್ದರು. ಅದರೆ ಬಿ-ರಿಪೋರ್ಟ್ ಹಾಕಿ‌ ಕೇಸ್ ಕ್ಲೋಸ್ ಮಾಡಲಾಗಿದೆ. ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತ. ಅವರ ಪತ್ನಿಯೇ ನ್ಯಾಯ ಸಿಗಲ್ಲ ಅಂತ ರಾಜ್ಯಪಾಲರಿಗೆ ಪತ್ರವನ್ನು ಬರೆದಿದ್ದರು. ಅವರ ಕುಟುಂಬದ ದುಃಖ ಇನ್ನೂ‌ ಮರೆಯಾಗಿಲ್ಲ. ಅಷ್ಟರೊಳಗೆ ಬಿ ರಿಪೋರ್ಟ್ ಬಂದಿದೆ ಎಂದು ಸಲೀಂ ಅಹ್ಮದ್‌ ತೀವ್ರ ಆಕ್ರೊಶ ವ್ಯಕ್ತಪಡಿಸಿದರು.

















































error: Content is protected !!
Scroll to Top