Saturday, October 1, 2022
spot_img
Homeರಾಜ್ಯಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ ಉದ್ಘಾಟನೆ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ ಉದ್ಘಾಟನೆ

ಬೆಂಗಳೂರು : ಮರಾಠಾ ಸಮುದಾಯದ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. 40 ಲಕ್ಷ ಜನಸಂಖ್ಯೆಯಿರುವ ಮರಾಠ ಸಮುದಾಯದ ಬಹುಕಾಲದ ಬೇಡಿಕೆಯಾದ 3B ಯಿಂದ 2Aಗೆ ಸೇರಿಸುವ ಕಾರ್ಯವನ್ನು ಸಂವಿಧಾನದ ಚೌಕಟ್ಟಿನಲ್ಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಜು. 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿನ ತ್ರಿಪುರವಾಸಿನಿ ಸಭಾಂಗಣದಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಉದ್ಘಾಟಿಸಿ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ ಇವತ್ತು ನಾನು ಹಾಗೂ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಲು ಮರಾಠ ಸಮುದಾಯದ ಸಹಕಾರವೂ ಕಾರಣ. ಅಂತಹ ಸಮುದಾಯದ ಬೇಡಿಕೆಗಳನ್ನು ಈಡೇರಿಸುವುದು ನಮ್ಮ ಕರ್ತವ್ಯ ಎಂದರು. ನಮ್ಮ ಪಕ್ಷದ ಸದಸ್ಯರು ಠೇವಣಿ ಕಳೆದುಕೊಂಡಾಗಲೂ ಮರಾಠ ಸಮುದಾಯ ನಮ್ಮ ಬೆನ್ನಿಗೆ ನಿಂತಿತ್ತು ಎಂದು ಯಡಿಯೂರಪ್ಪ ಸ್ಮರಿಸಿದರು. ಮರಾಠರ ಗೋಸಾಯಿ ಮಠದ ಭವಾನಿ ಪೀಠದ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಸಚಿವ ಸಿ.ಎನ್. ಅಶ್ವತ್ಥನಾರಾಯಣ್‌, ಶಾಸಕರಾದ ಲಕ್ಷ್ಮಣ ಸವದಿ, ಶ್ರೀನಿವಾಸ ಮಾನೆ ಉಪಸ್ಥಿತರಿದ್ದರು. ನಿಗಮದ ಅಧ್ಯಕ್ಷ ಎಂ.ಜಿ. ಮುಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಗಮದ ಆಡಳಿತ ನಿರ್ದೇಶಕ ಡಾ. ಪ್ರಕಾಶ್ ಆರ್. ಪಾಗೋಜಿ ಸ್ವಾಗತಿಸಿ, ಹಿಂದುಳಿದ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ ವಂದಿಸಿದರು. ನಿರೂಪಕಿ ಅಪರ್ಣ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Most Popular

error: Content is protected !!