ಕೊಲ್ಲಂ: ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ಬ್ರಾ ತೆಗೆಯುವಂತೆ ಹೇಳಿದ ಐವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.ಸೆರೆಯಾದವರಲ್ಲಿ ಇಬ್ಬರು ಮಹಿಳೆಯರು.
ಪರೀಕ್ಷೆ ವೇಳೆ ಅವಮಾನಕರ ತಪಾಸಣೆ ಬಗ್ಗೆ ಮೂರು ದೂರು ದಾಖಲಾಗಿವೆ.ಆದರೆ ತನ್ನ ಮಗಳಿಗಾದ ಅವಮಾನ ಮತ್ತು ಮಾನಸಿಕ ಹಿಂಸೆಯಿಂದ ದೂರು ನೀಡಿದ ವಿದ್ಯಾರ್ಥಿನಿ ತಂದೆಯ ದೂರನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಿರಾಕರಿಸಿದೆ. ದೂರನ್ನು ಕಾಲ್ಪನಿಕ ಮತ್ತು ತಪ್ಪು ಉದ್ದೇಶದಿಂದ ದಾಖಲಿಸಲಾಗಿದೆ ಎಂದು ಕೊಲ್ಲಂನಲ್ಲಿರುವ ನೀಟ್ ಪರೀಕ್ಷಾ ಕೇಂದ್ರದ ಅಧೀಕ್ಷಕರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ತಿಳಿಸಿದ್ದಾರೆ.
ಸೋಮವಾರ 17 ವರ್ಷದ ವಿದ್ಯಾರ್ಥಿನಿಯ ತಂದೆ ಮಾಧ್ಯಮಗಳಿಗೆ ಹೇಳಿಕೆ ನೀಡಿದಾಗ ಭಾರಿ ವಿವಾದ ಸ್ಫೋಟಗೊಂಡಿತ್ತು. ತನ್ನ ಮಗಳು ತನ್ನ ಮೊದಲ ನೀಟ್ ಪರೀಕ್ಷೆಯನ್ನು ತೆಗೆದುಕೊಂಡಿದ್ದಳು. ಮೂರು ಗಂಟೆಗಳ ಪರೀಕ್ಷೆಗೆ ಕುಳಿತುಕೊಳ್ಳುವ ಆಘಾತಕಾರಿ ಅನುಭವದಿಂದ ಇನ್ನೂ ಚೇತರಿಸಿಕೊಂಡಿಲ್ಲ.
ಪರೀಕ್ಷಾ ಕೇಂದ್ರವಾದ ಮಾರ್ ಥೋಮಾ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ ಭದ್ರತಾ ತಪಾಸಣೆ ನಡೆಸುತ್ತಿದ್ದಾಗ ಬ್ರಾದಲ್ಲಿರುವ ಲೋಹದ ಕೊಕ್ಕೆಗಳು ಬೀಪ್ ಆದ ನಂತರ ವಿದ್ಯಾರ್ಥಿನಿಗೆ ಬ್ರಾ ತೆಗೆಯುವಂತೆ ಹೇಳಿದ್ದರು ಎಂದು ತಂದೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಪರೀಕ್ಷಾ ಕೇಂದ್ರ ಆರೋಪವನ್ನು ನಿರಾಕರಿಸಿದ್ದರೂ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಇದು ನೀಟ್ ಪರೀಕ್ಷಾ ನಿಯಮಾವಳಿಯ ಅಡಿಯಲ್ಲಿ ನಡೆದ ತಪಾಸಣೆ, ವಿದ್ಯಾರ್ಥಿನಿಯ ತಂದೆಯ ಆರೋಪವನ್ನು ಒಪ್ಪಿಕೊಳ್ಳಲು ಸಾದ್ಯವಿಲ್ಲ ಎಂದು ಹೇಳಿದೆ.
ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪರೀಕ್ಷಾ ಹಾಲ್ಗೆ ಪ್ರವೇಶಿಸುವ ಮೊದಲು ಹುಡುಗಿಯರನ್ನು ಬ್ರಾ ತೆಗೆಯುವಂತೆ ಒತ್ತಾಯಿಸಿದ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.
ನೀಟ್ ಪರೀಕ್ಷೆಗೆ ಒಳ ಉಡುಪು ಬಿಚ್ಚಿಸಿದ ಪ್ರಕರಣ: ಐವರ ಬಂಧನ
Recent Comments
ಕಗ್ಗದ ಸಂದೇಶ
on