Saturday, October 1, 2022
spot_img
Homeಸ್ಥಳೀಯ ಸುದ್ದಿಸುಳ್ಳು ದಾಖಲೆ ಸೃಷ್ಟಿ : ಕಂಬಳದ ಉಸೇನ್‌ ಬೋಲ್ಟ್‌ ಖ್ಯಾತಿಯ ಶ್ರೀನಿವಾಸ ಗೌಡ ವಿರುದ್ಧ ವಂಚನೆ...

ಸುಳ್ಳು ದಾಖಲೆ ಸೃಷ್ಟಿ : ಕಂಬಳದ ಉಸೇನ್‌ ಬೋಲ್ಟ್‌ ಖ್ಯಾತಿಯ ಶ್ರೀನಿವಾಸ ಗೌಡ ವಿರುದ್ಧ ವಂಚನೆ ದೂರು

ಮೂಡಬಿದಿರೆ : ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತರಾಗಿರುವ ಕಂಬಳ ಕೋಣಗಳ ಓಟಗಾರ ಶ್ರೀನಿವಾಸ ಗೌಡ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿ ಸರಕಾರ ಮತ್ತು ಸಾರ್ವಜನಿಕರಿಗೆ ವಂಚಿಸಿವ ಮೂಲಕ ಕಂಬಳ ಕ್ಷೇತ್ರದ ಖ್ಯಾತಿಗೆ ಧಕ್ಕೆ ತಂದಿರುವ ಕುರಿತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ, ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬವರು ದೂರು ನೀಡಿದ್ದಾರೆ. ಕಂಬಳದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚಿಸಿದ ಆರೋಪ ಮಾಡಿದ್ದಾರೆ. ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿ ನಡೆಸುವ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸ್ಕೈ ವೀವ್ ಮಾಲೀಕ ರತ್ನಾಕರ ಎಂಬವರ ವಿರುದ್ಧ ವಂಚನೆ ದೂರು ನೀಡಲಾಗಿದೆ.
ಅಧಿಕೃತ ಮಾನ್ಯತೆ ಪಡೆಯದ, ನಂಬಲರ್ಹವಲ್ಲದ ಸ್ಕೈ ವೀವ್ ಸಂಸ್ಥೆ ಸುಳ್ಳು ತೀರ್ಪಿನ ದಾಖಲೆ ನೀಡಿದೆ.ಈ ಫಲಿತಾಂಶದ ಆಧಾರದಲ್ಲಿ ಶ್ರೀನಿವಾಸ ಗೌಡ ಅವರು ಕಂಬಳ ಓಟದಲ್ಲಿ ದಾಖಲೆ ಸೃಷ್ಟಿಸಿದ್ದಾರೆಂದು ಪ್ರಚಾರ ಮಾಡಲಾಗಿದೆ. ಪೊಲೀಸರು ಈ ಕುರಿತು ತನಿಖೆ ನಡೆಸದಿದ್ದರೆ ನ್ಯಾಯಾಲಯದಲ್ಲಿ ಖಾಸಗಿ ದಾವೆ ಹೂಡುವುದಾಗಿ ಲೋಕೇಶ್‌ ಶೆಟ್ಟಿ ಹೇಳಿದ್ದಾರೆ.
ಶ್ರೀನಿವಾಸ ಗೌಡ 2020ರ ಫೆ.1ರಂದು ಐಕಳ ಕಂಬಳದಲ್ಲಿ 100 ಮೀ. ದೂರವನ್ನು 9.55 ಸೆಕೆಂಡ್​ನಲ್ಲಿ ಕ್ರಮಿಸಿದ್ದರು. 2009ರ ಒಲಿಂಪಿಕ್ಸ್‌ನಲ್ಲಿ ಜಮೈಕಾದ ಓಟಗಾರ ಉಸೇನ್ ಬೋಲ್ಟ್ 100 ಮೀ. ಅನ್ನು 9.58 ಸೆಕೆಂಡ್​ನಲ್ಲಿ ಕ್ರಮಿಸಿದ ದಾಖಲೆಗಿಂತಲೂ ಶ್ರೀನಿವಾಸ ಗೌಡರ ಓಟ ವೇಗವಾಗಿತ್ತು. ಮಾಧ್ಯಮಗಳೆಲ್ಲ ಬೋಲ್ಟ್‌ ದಾಖಲೆ ಮುರಿದ ಶ್ರೀನಿವಾಸ ಗೌಡ ಎಂದು ಹಾಡಿ ಹೊಗಳಿದ್ದವು. ಬಳಿಕ ಭಾರಿ ಪ್ರಚಾರ ಪಡೆದುಕೊಂಡ ಶ್ರೀನಿವಾಸ ಗೌಡರಿಗೆ ರಾಜ್ಯ ಸರ್ಕಾರ ಸೇರಿ ದೇಶದ ಹಲವು ಸಂಸ್ಥೆಗಳು ಸನ್ಮಾನ, ಗೌರವ, ನೆರವು ನೀಡಿದ್ದವು.

LEAVE A REPLY

Please enter your comment!
Please enter your name here

Most Popular

error: Content is protected !!