ಹೊಸದಿಲ್ಲಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಖಾವಂದರು ರಾಜ್ಯಸಭೆ ಸದಸ್ಯರಾಗುವ ಈ ಅಮೃತ ಘಳಿಗೆಯನ್ನು ಕಣ್ತುಂಬಿಕೊಳ್ಳಲು ಇಡೀ ಕರುನಾಡು ಕಾತುರದಿಂದ ಕಾಯುತ್ತಿದೆ. ಜುಲೈ 6ರಂದು ಇತರ ನಾಲ್ವರೊಂದಿಗೆ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು.
ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು, ಅದರೊಂದಿಗೆ ರಾಷ್ಟ್ರಪತಿ ಚುನಾವಣೆಯ ಭರಾಟೆಯೂ ಜೋರಾಗಿದೆ. ಈ ನಡುವೆ ಮೇಲ್ಮನೆಯಲ್ಲಿ ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭವೂ ನಡೆಯುತ್ತಿದೆ. ನಿನ್ನೆಯಷ್ಟೇ ಖ್ಯಾತ ಆಟಗಾರ್ತಿ ಪಿ.ಟಿ. ಉಷಾ, ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇಂದು ಹೆಗ್ಗಡೆಯವರು ಮೇಲ್ಮನೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸ್ವೀಕಾರ ಹಿನ್ನೆಲೆಯಲ್ಲಿ, ಹೆಗ್ಗಡೆಯವರು ನಿನ್ನೆಯೇ ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಿದ್ದಾರೆ.
ಜುಲೈ 6ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಸಂಗೀತ ಮಾಂತ್ರಿಕ ಇಳಯರಾಜ, ಭಾರತ ಕಂಡ ಶ್ರೇಷ್ಠ ಅಥ್ಲೀಟ್ ಪಿ.ಟಿ. ಉಷಾ ಹಾಗೂ ವಿ. ವಿಜಯೇಂದ್ರ ಪ್ರಸಾದ್ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿದ್ದರು. ಇವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಅಭಿನಂದನೆ ಸಲ್ಲಿಸಿದ್ದರು.
1948ರಲ್ಲಿ ಜನಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ತಮ್ಮ 20ನೇ ವಯಸ್ಸಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದರು. ಶಿಕ್ಷಣ ಕ್ಷೇತ್ರ, ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗಕ್ಕಾಗಿ ಇವರು ಯುವಕರನ್ನು ಪ್ರೇರೇಪಿಸಿದ ಬಗೆ ಅಮೋಘ. ಸ್ವಯಂ ಉದ್ಯೋಗಾವಕಾಶಗಳ ಬಗ್ಗೆ ಅರಿವು ನೀಡಲು ಮತ್ತು ಗ್ರಾಮೀಣ ಯುವಕರಿಗೆ ತರಬೇತಿ ನೀಡಲು ಅವರು ಗ್ರಾಮೀಣಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯನ್ನು ಕೂಡಾ ಸ್ಥಾಪಿಸಿದ್ದಾರೆ. ಸರ್ಕಾರದ ಮಟ್ಟದಲ್ಲಿ ಮಾಡಬಹುದಾದ ಹಲವು ಕಾರ್ಯಗಳನ್ನು ಖಾಸಗಿಯಾಗಿ ಮಾಡಿಸಿದ್ದು, ಹೆಗ್ಗಡೆಯವರ ಸಾಧನೆ.
ಡಾ. ವೀರೇಂದ್ರ ಹೆಗ್ಗಡೆ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ
Recent Comments
ಕಗ್ಗದ ಸಂದೇಶ
on