Saturday, October 1, 2022
spot_img
Homeಸುದ್ದಿಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ

ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ

*1ರಿಂದ 8ನೇ ತರಗತಿ ಮಕ್ಕಳಿಗೆ ವರ್ಷದಲ್ಲಿ 46 ದಿನ ವಿತರಣೆ
ಬೆಂಗಳೂರು: ಮಕ್ಕಳ ಅಪೌಷ್ಟಿಕತೆ ನಿವಾರಿಸುವ ಸಲುವಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿ ವಿತರಿಸಲು ಸರಕಾರ ನಿರ್ಧರಿಸಿದೆ.
ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌ ಯೋಜನೆಯಡಿ 1ರಿಂದ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 46 ದಿನ ವಿತರಿಸಲಾಗುತ್ತದೆ.
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಫ್ಲೆಕ್ಸಿ ಅನುದಾನದಡಿ ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು 46 ದಿನಗಳ ಕಾಲ ಅನುಷ್ಠಾನಗೊಳಿಸಿತ್ತು.
ಈ ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲಿ 1-8ನೇ ತರಗತಿಯ ವಿದ್ಯಾರ್ಥಿಗಳಿಗೆ 100 ದಿನ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿ ವಿತರಿಸುವ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಆರ್. ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಸರ್ಕಾರ 46 ದಿನಗಳಿಗೆ ಅನುಮೋದನೆ ನೀಡಿದೆ.
ಯಾವುದೇ ವಿದ್ಯಾರ್ಥಿ ಮೊಟ್ಟೆ ಸೇವಿಸುವಂತೆ ಒತ್ತಾಯಿಸಬಾರದು. ಸಸ್ಯಾಹಾರಿಗಳು ಚಿಕ್ಕಿ ಮತ್ತು ಬಾಳೆಹಣ್ಣು ಆಯ್ಕೆ ಮಾಡಿಕೊಳ್ಳಬಹುದು ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!