Sunday, October 2, 2022
spot_img
Homeಸ್ಥಳೀಯ ಸುದ್ದಿಆರ್ಥಿಕವಾಗಿ ಹಿಂದುಳಿದವರಿಗೆ ಕೋಟಾದಡಿ ಸರಕಾರ ಸೀಟು ನೀಡದೇ ವಿದ್ಯಾರ್ಥಿಗಳಿಗೆ ಅನ್ಯಾಯ : ಜಿಎಸ್‌ಬಿ ಸಮಾಜ ಹಿತರಕ್ಷಣಾ...

ಆರ್ಥಿಕವಾಗಿ ಹಿಂದುಳಿದವರಿಗೆ ಕೋಟಾದಡಿ ಸರಕಾರ ಸೀಟು ನೀಡದೇ ವಿದ್ಯಾರ್ಥಿಗಳಿಗೆ ಅನ್ಯಾಯ : ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಅಸಮಾಧಾನ

ಕಾರ್ಕಳ : ಕಳೆದೆರಡು ವರ್ಷಗಳಿಂದ ಆರ್ಥಿಕವಾಗಿ ಹಿಂದುಳಿದವರಿಗೆ (EWS) ಕೋಟಾದನ್ವಯ ನ್ಯಾಯಯುತವಾಗಿ ಸಿಗಬೇಕಾದ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಸೀಟುಗಳು ಸಿಗದೆ ನೂರಾರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆಯ ತೀವ್ರ ಅಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಈ ವಿಚಾರದ ಬಗ್ಗೆ ಕೂಡಲೇ ಗಮನಹರಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕಾಗಿದೆ ಎಂದು ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಸರಕಾರವನ್ನು ಆಗ್ರಹಿಸಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಿಗಬೇಕಾದ 10% ಮೀಸಲಾತಿಯನ್ನು ಕೂಡಲೇ ದೊರಕಿಸಿ ಕೊಡುವಲ್ಲಿ ರಾಜ್ಯ ಸರಕಾರ ತನ್ನ ಇಚ್ಛಾ ಶಕ್ತಿಯನ್ನು ಪ್ರದರ್ಶಿಸಿ, ಕಾನೂನಿನ ತೊಡಕುಗಳು ಇದ್ದಲ್ಲಿ, ಕೂಡಲೇ ನಿವಾರಿಸಿ, ಕೇಂದ್ರ ಸರಕಾರದ ಕೊಡುಗೆಯನ್ನು ರಾಜ್ಯದ ವಿದ್ಯಾರ್ಥಿಗಳಿಗೆ ದೊರಕಿಸಿಕೊಡಬೇಕೆಂದು ಜಿಎಸ್‌ಬಿ ಹಿತರಕ್ಷಣ ವೇದಿಕೆ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

error: Content is protected !!