Homeಸುದ್ದಿಇಂದು ಇ.ಡಿ.ಯಿಂದ ಸೋನಿಯಾ ಗಾಂಧಿ ವಿಚಾರಣೆ

Related Posts

ಇಂದು ಇ.ಡಿ.ಯಿಂದ ಸೋನಿಯಾ ಗಾಂಧಿ ವಿಚಾರಣೆ

*ಬೆಂಗಳೂರು ಸೇರಿ ದೇಶದ್ಯಾಂತ ಕಾಂಗ್ರೆಸ್‌ ಪ್ರತಿಭಟನೆ

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಭ್ರಷ್ಟಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಇಂದು ವಿಚಾರಣೆಗೊಳಪಡಿಸಲಿದೆ. ಬೆಳಗ್ಗೆ 11 ಗಂಟೆಗೆ ಇ.ಡಿ. ಮುಂದೆ ವಿಚಾರಣೆಗೆ ಹಾಜರಾಗಲು ಸೋನಿಯಾಗೆ ಸಮನ್ಸ್‌ ನೀಡಲಾಗಿದೆ.
75 ವರ್ಷದ ಸೋನಿಯಾ ಗಾಂಧಿ ಅವರು ಜೂನ್ ತಿಂಗಳಲ್ಲಿ ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾದ ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಜೂ. 2 ರಂದು ಸೋನಿಯಾ ಗಾಂಧಿ ಅವರಿಗೆ ಕೊರೊನಾ ದೃಢಪಟ್ಟಿತ್ತು. ನಂತರ ಜೂನ್ 8 ರಂದು ಇ.ಡಿ. ಮುಂದೆ ಹಾಜರಾಗಬೇಕಿದ್ದ ಅವರು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ ಹೆಚ್ಚಿನ ಸಮಯವನ್ನು ಕೋರಿದ್ದರು.
ಬಳಿಕ ಜೂ. 12 ರಂದು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ಪಡೆದ ನಂತರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ವೈದ್ಯರ ನಿರ್ದೇಶನದಂತೆ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಅಂತಿಮವಾಗಿ ಇಂದು ವಿಚಾರಣೆಗೆ ಹಾಜರಾಗುತ್ತಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ:ಸೋನಿಯಾ ಗಾಂಧಿಯನ್ನು ಇ.ಡಿ. ವಿಚಾರಣೆಗೊಳಪಡಿಸುವುದನ್ನು ವಿರೋಧಿಸಿ ಕಾಂಗ್ರೆಸ್‌ ಇಂದು ಬೆಂಗಳೂರು ಸೇರಿದಂತೆ ದೇಶದ್ಯಾಂತ ಬೃಹತ್‌ ಪ್ರತಿಭಟನೆ ನಡೆಸಲಿದೆ. ತಮ್ಮ ಅಧಿನಾಯಕಿಗೆ ಕೇಂದ್ರ ಸರಕಾರ ತನಿಖೆ ನೆಪದಲ್ಲಿ ಕಿರುಕುಳ ನೀಡುತ್ತಿದೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ.
ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಮುಂದೆ ಧರಣಿ ನಡೆಸಲಿರುವ ಕಾಂಗ್ರೆಸ್‌ ನಾಯಕರು ನಂತರ ರಾಜಭವನದವರೆಗೆ ಮೆರವಣಿಗೆ ನಡೆಸಲಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತಿಭಟನಾ ರ್ಯಾಲಿ ಇಂದು ಮತ್ತು ನಾಳೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿ. ಕೆ. ಹರಿಪ್ರಸಾದ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ.

LEAVE A REPLY

Please enter your comment!
Please enter your name here

Latest Posts

error: Content is protected !!