ಉಡುಪಿ : ಸ್ಥಳೀಯ ಕುಚ್ಚಲು ಅಕ್ಕಿಯನ್ನು ಈ ವರುಷ ಪಡಿತರ ವ್ಯವಸ್ಥೆ ಮೂಲಕ ವಿತರಣೆ ಮಾಡಲು ಕೇಂದ್ರ ಸರಕಾರದಿಂದ ಅನುಮತಿ ಕೋರಲು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಅವರ ಅಧ್ಯಕ್ಷತೆಯ ಕಾರ್ಯಪಡೆ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದೆ. ಈ ಕುರಿತಂತೆ ಕಳೆದ ಬಾರಿಯೂ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದರೂ ಕೇಂದ್ರ ಸರಕಾರದಿಂದ ಅನುಮತಿ ಸಿಗುವಾಗಲೇ ವಿಳಂಬವಾಗಿತ್ತು. ಇದರಿಂದ ಕುಚ್ಚಲು ಅಕ್ಕಿಯನ್ನು ಬೆಂಬಲ ಬೆಲೆಯಡಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಿಸಲು ಸಾಧ್ಯವಾಗಿರಲಿಲ್ಲ. ಈ ವರ್ಷ ಅದೇ ಸಮಸ್ಯೆ ಎದುರಾಗಬಾರದು ಎನ್ನುವ ನಿಟ್ಟಿನಲ್ಲಿ ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲೆಯ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಸರಕಾರ ಸೂಚನೆ ನೀಡಿತ್ತು. ಅದರಂತೆ ಜಿಲ್ಲಾಡಳಿತ ಕೃಷಿ ಇಲಾಖೆ ಮತ್ತು ಆಹಾರ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಕಾರ್ಯಪಡೆ ಸಭೆ ನಡೆಸಿ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದೆ. ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಈ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತದೆ. ಕೇಂದ್ರ ಸರಕಾರವು ಅದನ್ನು ಪರಿಶೀಲಿಸಿ ಅನುಮತಿ ನೀಡುವ ಕುರಿತಂತೆ ನಿರ್ಧಾರ ಕೈಗೊಳ್ಳಬೇಕಾಗಿದೆ.
Recent Comments
ಕಗ್ಗದ ಸಂದೇಶ
on