ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ : ಜಾವೆಲಿನ್‌ ಫೈನಲ್​ ತಲುಪಿದ ನೀರಜ್ ಚೋಪ್ರಾ

ಅಮೆರಿಕಾ: ಟೋಕಿಯೊ ಒಲಿಂಪಿಕ್ ಚಾಂಪಿಯನ್‌, ಭಾರತದ ಜಾವೆಲಿನ್‌ ಸ್ಪರ್ಧಿ ನೀರಜ್‌ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ ಪುರುಷರ ಜಾವೆಲಿನ್‌ ಥ್ರೊ ಸ್ಪರ್ಧೆಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

2022 ರಲ್ಲಿ ಟೋಕಿಯೊ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಅವರು ಜಾವೆಲಿನ್ ಥ್ರೋ ಪಂದ್ಯಾವಳಿಯಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿಯೇ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಭಾರತದ ಸ್ಟಾರ್ ಅಥ್ಲೀಟ್ ಫೈನಲ್‌ಗೆ ಅರ್ಹತೆ ಪಡೆಯಲು ಕೇವಲ 10 ಸೆಕೆಂಡುಗಳನ್ನಷ್ಟೇ ತೆಗೆದುಕೊಂಡರು ಎಂಬುದಿಲ್ಲಿ ವಿಶೇಷವಾಗಿದೆ.

ಚಾಂಪಿಯನ್‌ಷಿಪ್‌ನ ಅರ್ಹತಾ ಸುತ್ತಿನಲ್ಲಿ ಶುಕ್ರವಾರ 88.39 ಮೀಟರ್ಸ್ ಸಾಧನೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ವಿಶ್ವ ಅಥ್ಲೆಟಿಕ್ಸ್‌ನಲ್ಲಿ ಫೈನಲ್‌ ತಲುಪಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪುರುಷರ ಜಾವೆಲಿನ್‌ ಥ್ರೊ ಫೈನಲ್ಸ್ ಭಾನುವಾರ ನಡೆಯಲಿದೆ.



































































































error: Content is protected !!
Scroll to Top