Wednesday, August 17, 2022
spot_img
Homeಜಿಲ್ಲಾಶಿರೂರು ಟೋಲ್‌ಗೇಟ್‌ನಲ್ಲಿ ಆ್ಯಂಬುಲನ್ಸ್ ಅಪಘಾತ ಪ್ರಕರಣ: ಚಾಲಕನ ವಿರುದ್ಧ ಕೇಸು ದಾಖಲು

ಶಿರೂರು ಟೋಲ್‌ಗೇಟ್‌ನಲ್ಲಿ ಆ್ಯಂಬುಲನ್ಸ್ ಅಪಘಾತ ಪ್ರಕರಣ: ಚಾಲಕನ ವಿರುದ್ಧ ಕೇಸು ದಾಖಲು


ಉಡುಪಿ : ಶಿರೂರು ಟೋಲ್‌ಗೇಟ್‌ನಲ್ಲಿ ಬುಧವಾರ ಸಂಭವಿಸಿರುವ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಆ್ಯಂಬುಲನ್ಸ್ ಚಾಲಕನ ವಿರುದ್ಧ ಕೇಸ್ ದಾಖಲಾಗಿದೆ. ಆ್ಯಂಬುಲನ್ಸ್ ಚಾಲಕ ರೋಷನ್ ವಿರುದ್ಧ ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗಿದ ಮತ್ತು ಅತಿ ವೇಗದ ಚಾಲನೆ ಕೇಸು ದಾಖಲಿಸಲಾಗಿದೆ. ಆರೋಪ ಸಾಬೀತಾದರೆ ಗರಿಷ್ಠ ಆರು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಆ್ಯಂಬುಲನ್ಸ್ ಟೋಲ್‌ಗೇಟ್‌ಗೆ ಗುದ್ದಿ ಪಲ್ಟಿಯಾಗಿದ್ದು, ಅದರಲ್ಲಿದ್ದ ರೋಗಿ ಸಹಿತ ನಾಲ್ವರು ಸಾವಿಗೀಡಾಗಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ. ಆ್ಯಂಬುಲನ್ಸ್ ಶಿರೂರು ಟೋಲ್‌ಗೇಟ್ ಬಳಿ ಬರುತ್ತಿದ್ದಾಗ ದಾರಿಯಲ್ಲಿ ಆಕಳು ಮಲಗಿರುವುದು ಕಂಡುಬಂದಿದೆ. ಈ ಸಂದರ್ಭದಲ್ಲಿ ಗೊಂದಲಕ್ಕೊಳಗಾಗಿರುವ ಡ್ರೈವರ್ ಬ್ರೇಕ್ ಹೊಡೆದಿದ್ದಾನೆ. ಇದರಿಂದ ಆ್ಯಂಬುಲನ್ಸ್ ಸ್ಕಿಡ್‌ ಆಗಿ ಟೋಲ್‌ಗೇಟ್‌ಗೆ ಬಡಿದಿದೆ.
ಈ ಅಪಘಾತದಲ್ಲಿ ಟೋಲ್ ಸಿಬ್ಬಂದಿಯ ನಿರ್ಲಕ್ಷ್ಯವೂ ಕಂಡುಬಂದಿದ್ದು, ಐಆರ್‌ಬಿ ಇನ್ಫ್ರಾಸ್ಟ್ರಕ್ಚರ್ ಡೆವಲಪರ್ಸ್ ಲಿಮಿಟೆಡ್ ವಿರುದ್ಧ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇಲ್ಲಿನ ಸಿಬ್ಬಂದಿ ದೀಪಕ್ ಶೆಟ್ಟಿ ನೀಡಿರುವ ದೂರಿನ ಆಧಾರದ ಮೇಲೆ ಬೈಂದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇವರೇ ಈ ಘಟನೆಯೇ ಪ್ರಮುಖ ಸಾಕ್ಷಿದಾರರಾಗಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!