Sunday, October 2, 2022
spot_img
Homeಸ್ಥಳೀಯ ಸುದ್ದಿಶನಿವಾರ ಬಿಜೆಪಿ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ

ಶನಿವಾರ ಬಿಜೆಪಿ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ


ಕಾರ್ಕಳ : ಕಾರ್ಕಳ ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ ಜು.23 ರಂದು ಮಧ್ಯಾಹ್ನ 2.30ಕ್ಕೆ ವಿಕಾಸ ಕಚೇರಿಯಲ್ಲಿ ಜರುಗಲಿರುವುದು. ವಿಶೇಷ ಕಾರ್ಯಕಾರಿಣಿ ಸಭೆಯ ಉದ್ಘಾಟನೆಯನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ನೆರವೇರಿಸಲಿರುವರು. ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಅಧ್ಯಕ್ಷತೆಯಲ್ಲಿ ಜರುಗುವ ಈ ಸಭೆಯಲ್ಲಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಮೀಳಾ ಹರೀಶ್‌, ರಶ್ಮಿತಾ ಶೆಟ್ಟಿ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್‌ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಮಣಿರಾಜ ಶೆಟ್ಟಿ, ಸವಿತಾ ಕೋಟ್ಯಾನ್‌, ಜಿಲ್ಲಾ ಕಾರ್ಯದರ್ಶಿಗಳಾದ ರವೀಂದ್ರ ಕುಮಾರ್‌, ರೇಶ್ಮಾ ಉದಯ್‌ ಶೆಟ್ಟಿ, ಕಾರ್ಕಳ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯರಾಂ ಸಾಲ್ಯಾನ್‌, ನವೀನ್‌ ನಾಯಕ್‌, ಜಿಲ್ಲಾ ಮ.ಮೋ.ಕಾರ್ಯದರ್ಶಿ ವಿದ್ಯಾ ಪೈ, ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಗಾಯತ್ರಿ ಪ್ರಭು ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here

Most Popular

error: Content is protected !!