Saturday, October 1, 2022
spot_img
Homeಸ್ಥಳೀಯ ಸುದ್ದಿಕಾರ್ಕಳ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ

ಕಾರ್ಕಳ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ

ಕಾರ್ಕಳ : ಬುಡಕಟ್ಟು ಸಮುದಾಯದಿಂದ ಬಂದ ದ್ರೌಪದಿ ಮುರ್ಮು ಇಂದು ರಾಷ್ಟ್ರಪತಿ ಸ್ಥಾನ ಅಲಂಕರಿಸಿದ್ದಾರೆ. ಕಾಂಗ್ರೆಸ್‌ ಸರಕಾರ ಇದ್ದಾಗ ಉನ್ನತ ಹುದ್ದೆಗಳೆಲ್ಲವೂ ಶ್ರೀಮಂತರು, ಪ್ರಭಾವಿಗಳ ಪಾಲಾಗುತ್ತಿತ್ತು. ನರೇಂದ್ರ ಮೋದಿ ಸರಕಾರ ಆಡಳಿತಕ್ಕೆ ಬಂದ ಬಳಿಕ ಇದೆಲ್ಲವೂ ಬದಲಾಗಿದೆ ಎಂದು ಸಚಿವ ವಿ. ಸುನೀಲ್‌ ಕುಮಾರ್‌ ಹೇಳಿದರು.
ಅವರು ಶನಿವಾರ ವಿಕಾಸ ಜನ ಸೇವಾ ಕಚೇರಿಯಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು. ಮಹಾಮಾರಿ ಕೊರೋನಾ ಸಂದರ್ಭ 200 ಕೋಟಿ ಲಸಿಕೆಯನ್ನು ಉಚಿತವಾಗಿ ನೀಡಲಾಗಿದೆ. ಈ ನಿಟ್ಟಿನಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಸುನೀಲ್‌ ಹೇಳಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಹರ್‌ ಘರ್‌ ತಿರಂಗಾ ಸ್ಲೋಗನ್‌ ನೊಂದಿಗೆ ಎಲ್ಲರ ಮನೆಯಲ್ಲಿ ಆ.9 ರಿಂದ 15ರವರೆಗೆ ಧ್ವಜ ರಾರಾಜಿಸಬೇಕು. ಇದರೊಂದಿಗೆ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದ ಕತೆಯನ್ನು ತಿಳಿಸುವ ಕಾರ್ಯವಾಗಬೇಕು ಎಂದವರು ಹೇಳಿದರು.

ಸನ್ಮಾನ
ಅಂತಾರಾಷ್ಟ್ರೀಯ ಕ್ರೀಡಾಪಟು ಪವರ್‌ ಲಿಫ್ಟರ್‌ ಅಕ್ಷತಾ ಪೂಜಾರಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್‌, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಮಂಡಲ ಕಾರ್ಯದರ್ಶಿಗಳಾದ ಜಯರಾಂ ಸಾಲ್ಯಾನ್‌, ನವೀನ್‌ ನಾಯಕ್‌, ಜಿಲ್ಲಾ ಉಪಾಧ್ಯಕ್ಷೆ ಸವಿತಾ ಕೋಟ್ಯಾನ್‌, ಪುರಸಭಾ ಅಧ್ಯಕ್ಷೆ ಸುಮಾ ಕೇಶವ್‌, ಜಿಲ್ಲಾ ಮ. ಮೋ. ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ಸಮಾಜ ಸೇವಕಿ ಗಾಯತ್ರಿ ಪ್ರಭು, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾ ರಾವ್‌ ಮತ್ತು ವಿನಯಾ ಡಿ. ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನಯಾ ಬಂಗೇರ ಸ್ವಾಗತಿಸಿ, ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಉಪಾಧ್ಯಕ್ಷೆ ಜ್ಯೋತಿ ರಮೇಶ್‌ ದೇಶಭಕ್ತಿ ಗೀತೆ, ನಗರ ಮಹಾ ಶಕ್ತಿಕೇಂದ್ರದ ಅಧ್ಯಕ್ಷೆ ಸುಮಾ ರವಿಕಾಂತ್ ವಂದೇ ಮಾತರಂ ಹಾಡಿದರು. ಮ.ಮೋ. ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್‌ ವರದಿ ಮಂಡಿಸಿದರು. ಮುಡಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷೆ ಅಮೃತಾ ಪ್ರಭು ಕಾರ್ಯಕ್ರಮ ನಿರೂಪಿಸಿ, ಮಹಿಳಾ ಮೋರ್ಚಾ ಉಪಾಧ್ಯಕ್ಷೆ ನಾಗವೇಣಿ ವಂದಿಸಿದರು.

LEAVE A REPLY

Please enter your comment!
Please enter your name here

Most Popular

error: Content is protected !!