ಕೋಲ್ಕತ್ತಾ : ಶಿಕ್ಷಕರ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಶನಿವಾರ ಬಂಧಿಸಿದೆ. ಹಗರಣ ನಡೆದಾಗ ರಾಜ್ಯ ಶಿಕ್ಷಣ ಸಚಿವರಾಗಿದ್ದ ಚಟರ್ಜಿ ಅವರನ್ನು ಸುಮಾರು 26 ಗಂಟೆಗಳ ಕಾಲ ತೀವ್ರ ತನಿಖೆಯ ನಂತರ ಇಂದು ಬಂಧಿಸಲಾಗಿದೆ. ಪ್ರಸ್ತುತ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಕೈಗಾರಿಕೆ ಸಚಿವರಾಗಿರುವ ಚಟರ್ಜಿ ಅವರನ್ನು ಸಾಲ್ಟ್ ಲೇಕ್ ಪ್ರದೇಶದ ಸಿಜಿಒ ಕಾಂಪ್ಲೆಕ್ಸ್ನಲ್ಲಿರುವ ಇಡಿ ಕಚೇರಿಗೆ ಬಂಧಿಸಿ ಕರೆದೊಯ್ಯಲಾಯಿತು. ನಿನ್ನೆ ಬೆಳಗ್ಗೆಯಿಂದ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳಿಗೆ ಚಟರ್ಜಿ ಸರಿಯಾಗಿ ಸಹಕರಿಸುತ್ತಿರಲಿಲ್ಲ. ಇಂದು ನ್ಯಾಯಾಲಯ ಮುಂದೆ ಅವರನ್ನು ಹಾಜರುಪಡಿಸಲಾಗುವುದು ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಸಚಿವ ಚಟರ್ಜಿಯವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಬಳಿಯಿಂದ ರೂ.21 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡ ನಂತರ ಅವರನ್ನು ಕೂಡ ಬಂಧಿಸಲಾಗಿದೆ. ನಿನ್ನೆ ಇಡಿ ಅಧಿಕಾರಿಗಳು ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಹಲವು ಕಡೆಗಳಲ್ಲಿ ದಾಳಿ ನಡೆಸಿ ತನಿಖೆ ನಡೆಸಿ ಸುಮಾರು ರೂ. 20 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡ ನಂತರ 12ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ಅದರಲ್ಲಿ ಇಬ್ಬರು ಸಚಿವರು ಒಳಗೊಂಡಿದ್ದಾರೆ.
Recent Comments
ಕಗ್ಗದ ಸಂದೇಶ
on