ಕಾರ್ಕಳ : ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಜು. 24ರಂದು ಮಧ್ಯಾಹ್ನ 12 ಗಂಟೆಗೆ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಲಿದೆ.
ಪತ್ರಕರ್ತ ರಾಮಚಂದ್ರ ಬರೆಪ್ಪಾಡಿ ಕಾರ್ಯಕ್ರಮ ಉದ್ಘಾಟಿಸುವರು. ಶಶಿ ಕಿಚನ್ ಯೂಟ್ಯೂಬರ್ ಶಿರ್ವ ಶಶಿಕಲಾ ಕುಲಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ನಂದಳಿಕೆ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು, ಕ್ಲಬ್ ನಿರ್ದೇಶಕ ಅಬ್ಬನಡ್ಕ ಪದ್ಮಶ್ರೀ ಸತೀಶ್ ಪೂಜಾರಿ ಉಪಸ್ಥಿತರಿರುವರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರ್ವಹಿಸಲಿರುವರು.
ಆಕರ್ಷಣೆ
ಕಾರ್ಯಕ್ರಮದಲ್ಲಿ ಸುಮಾರು 25 ಬಗೆಯ ತುಳುನಾಡಿನ ತಿನಿಸುಗಳು ವಿಶೇಷ ಆಕರ್ಷಣೆಯಾಗಿರಲಿದೆ. ಸಭಾ ಕಾರ್ಯಕ್ರಮದ ಅನಂತರ ನೃತ್ಯ ಹಾಗೂ ಸಂಗೀತ ಕಾರ್ಯಕ್ರಮ ಜರಗಲಿದೆ ಎಂದು ಫ್ರೆಂಡ್ಸ್ ಕ್ಲಬ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.