ಲಖನೌ: ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಬಧರ್ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಕನ್ವರ್ ಯಾತ್ರಿಕರು ಮಧ್ಯಪ್ರದೇಶದ ಗ್ವಾಲಿಯರ್ಗೆ ಸೇರಿದವರು.
ಬೆಳಗಿನ ಜಾವ 2.15ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಹತ್ರಾಸ್ ಸಮೀಪ ಈ ಭೀಕರ ಘಟನೆ ಸಂಭವಿಸಿದೆ. ಕನ್ವರ್ ಯಾತ್ರೆ ಕೈಗೊಂಡಿದ್ದ ಭಕ್ತರು ಹರಿದ್ವಾರದಿಂದ ಗ್ವಾಲಿಯರ್ಗೆ ಹೋಗುತ್ತಿದ್ದರು. ಘಟನೆ ಕುರಿತು ತನಿಖೆ ನಡೆಯುತ್ತಿದ್ದು, ಟ್ರಕ್ ಚಾಲಕನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕನ್ವರ್ ಭಕ್ತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುವನ್ನು ಆಗ್ರಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ಕನ್ವರ್ ಯಾತ್ರಿಕರ ಮೇಲೆ ಹರಿದ ಟ್ರಕ್: 6 ಸಾವು
Recent Comments
ಕಗ್ಗದ ಸಂದೇಶ
on