ಬೆಂಗಳೂರು : ”ವೀ ನೀಡ್ ಎಮರ್ಜೆನ್ಸಿ ಹಾಸ್ಪಿಟಲ್ ಇನ್ ಉತ್ತರ ಕನ್ನಡ” ಎಂಬ ಹ್ಯಾಶ್ ಟ್ಯಾಗ್ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿತ್ತು. ಕಳೆದ ವಾರ ಶಿರೂರು ಟೋಲ್ ಗೇಟ್ನಲ್ಲಿ ನಡೆದ ಭೀಕರ ಆಂಬುಲೆನ್ಸ್ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಬಳಿಕ ಉತ್ತರ ಕನ್ನಡ ಕನ್ನಡ ಜಿಲ್ಲೆಯ ಜನರ ಬೇಡಿಕೆ, ಕೂಗು ಜೋರಾಗಿತ್ತು. ಟ್ವಿಟ್ಟರ್, ಫೇಸ್ಬುಕ್ ಸೇರಿದಂತೆ ಹಲವೆಡೆ ಜನರು ಅಭಿಯಾನವನ್ನು ಆರಂಭಿಸಿದ್ದರು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ಬೆಂಬಲಿಸಿದ್ದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿ ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
Recent Comments
ಕಗ್ಗದ ಸಂದೇಶ
on