ಕಾರ್ಕಳ : ಶ್ರೀ ಶಂಕರ ಪ್ರತಿಷ್ಠಾನದ ಮಹಾಸಭೆ ಜು. 31ರಂದು ಬೆಳಿಗ್ಗೆ 9 ಗಂಟೆಗೆ ಅನಂತಶಯನ ಶ್ರೀ ವಿಶ್ವೇಶ್ವರ ವೇಣುಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ಜರುಗಲಿದೆ. ಶ್ರೀ ಶಂಕರ ಪ್ರತಿಷ್ಠಾನದ ಅಧ್ಯಕ್ಷ ಕೇಶವ ರಾವ್ ಕುಕ್ಕುಂದೂರು ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಉಪಮೇಯರ್ ಸುಮಂಗಳ ಎಸ್. ರಾವ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಇದೇ ಸಂದರ್ಭ ಮನೋಹರ ರಾವ್ ದಂಪತಿಯನ್ನು ಸನ್ಮಾನಿಸಲಾಗುವುದು ಎಂದು ಪ್ರತಿಷ್ಠಾನ ಪ್ರಕಟನೆಯಲ್ಲಿ ತಿಳಿಸಿದೆ.























