ನಂದಳಿಕೆ : ಯುದ್ಧದಲ್ಲಿ ಮಡಿದ ಯೋಧರಿಗೆ ನಮನ

ಕಾರ್ಕಳ : ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂಘದ ಕಚೇರಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ದೇಶಕ್ಕಾಗಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಲಾಯಿತು. ಭಾರತಾಂಬೆಯ ಭಾವಚಿತ್ರದೆದುರು ಮೊಂಬತ್ತಿ ಬೆಳಗಿಸಿ 23 ವರ್ಷಗಳ ಹಿಂದೆ ಕಾರ್ಗಿಲ್‌ ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಯೋಧರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ ಅಧ್ಯಕ್ಷ ಪ್ರಶಾಂತ್ ಪೂಜಾರಿ ಮಾತನಾಡಿ, 1999ರಲ್ಲಿ ಪಾಕ್ ಭಾರತೀಯ ಗಡಿ ಆಕ್ರಮಿಸಿದ್ದರ ವಿರುದ್ಧ ನಡೆದ ಯುದ್ಧದಲ್ಲಿ ಭಾರತದ 527 ಸೈನಿಕರು ವೀರ ಮರಣವನ್ನಪ್ಪಿದರು. 1350ಕ್ಕೂ ಅಧಿಕ ವೀರ ಯೋಧರು ಗಾಯಾಳಾಗಿದ್ದರು. ಇಂದು ಕಾರ್ಗಿಲ್ ವಿಜಯೋತ್ಸವವಾಗಿ 23 ವರ್ಷಗಳೇ ಸಂದಿದೆ. ಕಾರ್ಗಿಲ್ ವಿಜಯ ಹಾಗೂ ಸೈನಿಕರ ಕೆಚ್ಚೆದೆಯ ಹೋರಾಟದ ನೆನಪಿಗಾಗಿ ಭಾರತಾಂಬೆಯ ಭಾವಚಿತ್ರದೆದುರು ನಮ್ಮ ವೀರ ಸೈನಿಕರಿಗೆ ಗೌರವ ಸಲ್ಲಿಸುತ್ತಿದ್ಧೇವೆ ಎಂದರು.
ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸಂಘದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಪೂರ್ವಾಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ, ನಿಕಟ ಪೂರ್ವಾಧ್ಯಕ್ಷ ಉದಯ ಅಂಚನ್, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕಾರ್ಯದರ್ಶಿ ಕಾಸ್ರಬೈಲು ಸುರೇಶ್ ಪೂಜಾರಿ, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ಕೋಶಾಧಿಕಾರಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಹರೀಶ್ ಪೂಜಾರಿ, ಸುದರ್ಶನ್ ಕುಂದರ್, ಕೀರ್ತನ್ ಕುಮಾರ್, ಪ್ರಶಾಂತ್ ಬೋಳ, ಶಾಂತರಾಮ್ ಕುಲಾಲ್, ಆರತಿ ಕುಮಾರಿ, ಸುಲೋಚನಾ ಕೋಟ್ಯಾನ್, ಪದ್ಮಶ್ರೀ ಪೂಜಾರಿ, ಅಶ್ವಿನಿ ಪ್ರಭಾಕರ್, ಲಲಿತಾ ಆಚಾರ್ಯ, ಲೀಲಾ ಪೂಜಾರಿ, ಹರಿಣಾಕ್ಷಿ ಪೂಜಾರಿ ಮೊದಲಾದವರಿದ್ದರು.

















































error: Content is protected !!
Scroll to Top