ವಿದ್ಯಾರ್ಥಿಗಳು ವಿದ್ಯೆ – ಉದ್ಯೋಗದೊಂದಿಗೆ ಸಮಾಜಕ್ಕಾಗಿ ಶ್ರಮಿಸಬೇಕು – ವಿನಯ ಹೆಗ್ಡೆ

ನಿಟ್ಟೆ : ಇಂದಿನ ದಿನಮಾನಗಳಲ್ಲಿ ಅಗತ್ಯತೆಗೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಬೇಕು. ತಮ್ಮ ತಮ್ಮ ಐಚ್ಛಿಕ ವಿಷಯಗಳಲ್ಲಿ ಸಮರ್ಥ ಬೆಳವಣಿಗೆ ತೋರುವುದು ಅಗತ್ಯವಾಗಿದ್ದು, ನಿಟ್ಟೆ ವಿದ್ಯಾಸಂಸ್ಥೆಯು ಈ ದೃಷ್ಠಿಯಲ್ಲಿ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿದೆ. ವಿದ್ಯೆ ಹಾಗೂ ಉದ್ಯೋಗದೊಂದಿಗೆ ಸಮಾಜದ ಏಳಿಗೆಗೂ ವಿದ್ಯಾರ್ಥಿಗಳು ಶ್ರಮಿಸಬೇಕು. ತಾಂತ್ರಿಕ ಶಿಕ್ಷಣದೊಂದಿಗೆ ದೈಹಿಕ ಆರೋಗ್ಯ ಹಾಗೂ ಮಾನಸಿಕ ನೆಮ್ಮದಿಗಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕೆಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಅಭಿಪ್ರಾಯಪಟ್ಟರು.
ಅವರು ಜು. 23ರಂದು ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ನಿಟ್ಟೆ ಬಿ. ಟೆಕ್ ಕೋರ್ಸ್ ಹಾಗೂ ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ವಿವಿಧ ಕೋರ್ಸ್ ಗಳ ನೂತನ ಬ್ಯಾಚ್ ಉದ್ಘಾಟಿಸಿ, ಮಾತನಾಡಿದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಡಾ. ಶಾಂತರಾಮ್ ಶೆಟ್ಟಿ ಮಾತನಾಡಿ, ನಿಟ್ಟೆ ವಿದ್ಯಾಸಂಸ್ಥೆಯ ಇತಿಹಾಸ, ಬೆಳೆದುಬಂದ ಹಾದಿ ಹಾಗೂ ಸಮಾಜದ ಏಳಿಗೆಯಲ್ಲಿ ನಿಟ್ಟೆ ಸಮೂಹ ಸಂಸ್ಥೆಗಳ ಪಾತ್ರದ ಬಗ್ಗೆ ತಿಳಿಸಿದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ಕಾಲೇಜಿನ ಮುಂದಿನ ಯೋಜನೆ ಕುರಿತು ವಿವರಿಸಿದರು.
ನಿಟ್ಟೆ ವಿಶ್ವವಿದ್ಯಾಲಯದ ಸಹ ಕುಲಪತಿ ಡಾ. ಎಂ.ಎಸ್. ಮೂಡಿತ್ತಾಯ, ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಕುಲಸಚಿವ ಡಾ. ಹರ್ಷ ಹಲಹಳ್ಳಿ ಹಾಗೂ ಕಂಟ್ರೋಲರ್ ಆಫ್ ಎಕ್ಸಾಮಿನೇಶನ್ ಡಾ. ಪ್ರಸಾದ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳೂಣ್ಕರ್ ಸ್ವಾಗತಿಸಿದರು. ಡಾ. ಎನ್.ಎಸ್.ಎ.ಎಂ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಬಿ.ಕೆ ವಂದಿಸಿದರು. ಡೀನ್ ಸ್ಟೂಡೆಂಟ್ ವೆಲ್ಫೇರ್ ಡಾ. ನರಸಿಂಹ ಬೈಲಕೇರಿ ಕಾರ್ಯಕ್ರಮ ಸಂಯೋಜಿಸಿದರು. ಬಯೋಟೆಕ್ ವಿಭಾಗದ ಪ್ರಾಧ್ಯಾಪಕಿ ಡಾ. ವಿದ್ಯಾ ಎಸ್.ಎಂ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಅನಂತರ ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಡೀನ್ ಎಕಾಡೆಮಿಕ್ಸ್ ಡಾ. ಐ. ರಮೇಶ್ ಮಿತ್ತಂತಾಯ ಸಂವಾದ ನಡೆಸಿದರು.

















































error: Content is protected !!
Scroll to Top