Wednesday, August 17, 2022
spot_img
Homeರಾಜ್ಯಪ್ರವೀಣ್‌ ಹತ್ಯೆ ಹಿನ್ನೆಲೆ : ರಾಜೀನಾಮೆಗೆ ಮುಂದಾದ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳು

ಪ್ರವೀಣ್‌ ಹತ್ಯೆ ಹಿನ್ನೆಲೆ : ರಾಜೀನಾಮೆಗೆ ಮುಂದಾದ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳು

ಚಿಕ್ಕಮಗಳೂರು : ದ.ಕ. ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿರುವುದನ್ನು ಖಂಡಿಸಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾದ ಸದಸ್ಯರು, ಸರಕಾರದ ವಿರುದ್ಧವೇ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪಕ್ಷದ ಹುದ್ದೆಗೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ. ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಬಿಜೆಪಿ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರು. ಬಿಜೆಪಿ ಸರಕಾರದಿಂದಲೇ ಕಾರ್ಯಕರ್ತರಿಗೆ ರಕ್ಷಣೆ ದೊರೆಯುತ್ತಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಿಲ್ಲ ಎಂದು ಚಿಕ್ಕಮಗಳೂರು, ಬಾಗಲಕೋಟೆ, ಚಿತ್ರದುರ್ಗ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸಿದ್ದಾರೆ. ಜನತೆಗೆ ಬೇಕಾಗಿರುವುದು ನಮ್ಮ ಪೌರುಷದ ಮಾತುಗಳಲ್ಲ. ಸರಕಾರ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳದೇ ಇದ್ದಲ್ಲಿ ತಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರೇಣುಕಾಚಾರ್ಯ ತಿಳಿಸಿದ್ದಾರೆ.

10 ಮಂದಿ ವಶಕ್ಕೆ
ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮದವರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!