ನದಿಗೆ ಜಿಗಿದ ಇಬ್ಬರು ವಿದ್ಯಾರ್ಥಿನಿಯರು; ಒಬ್ಬಳ ಶವ ಪತ್ತೆ

ಬೆಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯದ ಹೊಸಕೋಟೆ ಸಮೀಪ ಇಂದು ಬೆಳಗ್ಗೆ ಸಂಭವಿಸಿದೆ.
ಪಿನಾಕಿನಿ ನದಿಗೆ ಜಿಗಿದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪೈಕಿ ಒಬ್ಬಾಕೆಯನ್ನು ರಾಜೇಶ್ವರಿ (17) ಎಂದು ಗುರುತಿಸಲಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮುಗಳೂರು ಗ್ರಾಮದ ಬಳಿ ಆನಗೊಂಡನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇಬ್ಬರೂ ಲಕ್ಕೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಪೊಲೀಸರಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಓರ್ವ ವಿದ್ಯಾರ್ಥಿನಿಯ ಶವ ಸಿಕ್ಕಿದೆ. ಈನ್ನೋರ್ವಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.



































































































































































































































































error: Content is protected !!
Scroll to Top