ಕಾರ್ಕಳ: ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾದ ಅಧ್ಯಕ್ಷರಾದಿಯಾಗಿ ಎಲ್ಲ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.
ಈ ಹತ್ಯೆ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. ತುಮಕೂರಿನಲ್ಲಿ ಸಾಮಾಜಿಕ ಜಾಲತಾಣದ ಪ್ರಕೋಷ್ಠ ಸದಸ್ಯರು ರಾಜಿನಾಮೆ ನೀಡಿದ್ದಾರೆ. ರಾಯಚೂರಿನಲ್ಲೂ ಸದಸ್ಯರು ರಾಜೀನಾಮೆ ಕೊಟ್ಟಿದ್ದಾರೆ.
ತಮ್ಮದೇ ಪಕ್ಷ ಆಡಳಿತದಲ್ಲಿದ್ದರೂ ಪಕ್ಷದ ಕಾರ್ಯಕರ್ತರು, ಸೈದ್ಧಾಂತಿಕ ಬೆಂಬಲಿಗರ ಸಾಲು ಸಾಲು ಹತ್ಯೆಗಳಾಗುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಜಿಲ್ಲಾ ಮಟ್ಟದ ಹಲವು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ. ಇಂದಿನ ಕಾಲಘಟ್ಟದಲ್ಲೂ ಕೂಡಾ ಸೈದ್ಧಾಂತಿಕ ವಿಚಾರಧಾರೆಗೆ ಹೋರಾಡುವಂತಹ ದುರ್ಗತಿ ಬಂದಿರುವುದು ಕಾರ್ಯಕರ್ತರಿಗೆ ನೋವಾಗುತ್ತಿದೆ. ಪ್ರವೀಣ್ ನೆಟ್ಟಾರು ಸಾವು ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು, ಹಿಂದೆಲ್ಲಾ ನಡೆದ ಕೊಲೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣಮುಂದೆಯೇ ಇದೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗಿಯೇ ಉಳಿದಿರುವ ಕಾರಣ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚ ಅಧ್ಯಕ್ಷ ಹುದ್ದೆಯಾದಿಯಾಗಿ ಯುವಮೋರ್ಚಾದ ಎಲ್ಲಾ ಪದಾಧಿಕಾರಿಗಳು ಹಾಗೂ 9 ಮಂಡಲದ ಅಧ್ಯಕ್ಷರು ಸೇರಿ ಎಲ್ಲರೂ ಪಕ್ಷದ ಜವಾಬ್ದಾರಿಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ ಎಂದು ಪತ್ರದಲ್ಲಿ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂದೀಪ್ ಹರವಿನಂಗಡಿ ತಿಳಿಸಿದ್ದಾರೆ. ರಾಜರಾಜೇಶ್ವರಿ ನಗರ ಮಂಡಲದ ಸಾಮಾಜಿಕ ಜಾಲತಾಣದ ಸಂಚಾಲಕನ ಹುದ್ದೆಗೆ ಶ್ರೀನಿವಾಸ್ ಗೌಡ ಅವರು ರಾಜೀನಾಮೆ ನೀಡಿದ್ದರೆ, ಚಿಕ್ಕಮಗಳೂರು ಜಿಲ್ಲಾ ಮಾಧ್ಯಮ ಪ್ರಮುಖರಾದ ಪ್ರೀತಮ್ ಹೆಬ್ಬಾರ್ ಅವರೂ ರಾಜೀನಾಮೆ ನೀಡಿದ್ದಾರೆ.
ಪ್ರವೀಣ್ ಹತ್ಯೆ ಖಂಡಿಸಿ ಮುಂದುವರಿದ ರಾಜೀನಾಮೆ: ಚಿಕ್ಕಮಗಳೂರಿನಲ್ಲಿ ಸಾಮೂಹಿಕ ಪದತ್ಯಾಗ
Recent Comments
ಕಗ್ಗದ ಸಂದೇಶ
on