Friday, August 19, 2022
spot_img
Homeಸುದ್ದಿಪ್ರವೀಣ್‌ ಹತ್ಯೆ ತನಿಖೆಗೆ ವಿಶೇಷ ಉಗ್ರ ನಿಗ್ರಹ ಸ್ಕ್ವಾಡ್

ಪ್ರವೀಣ್‌ ಹತ್ಯೆ ತನಿಖೆಗೆ ವಿಶೇಷ ಉಗ್ರ ನಿಗ್ರಹ ಸ್ಕ್ವಾಡ್

ಬೆಂಗಳೂರು: ಬಿಜೆಪಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯ ಆರೋಪಿಗಳನ್ನು ಸದೆಬಡಿಯಲು ಸರ್ಕಾರ ಬದ್ಧವಾಗಿದ್ದು, ಮಾಮೂಲಾದ ಕ್ರಮಗಳ ಹೊರತಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇಂಥ ಕೃತ್ಯದಲ್ಲಿ ಭಾಗಿಯಾದ ಸಂಘಟನೆಗಳನ್ನು ನಾಶ ಮಾಡಲು, ಈಗ ಇರುವ ವ್ಯವಸ್ಥೆಯ ಹೊರತಾಗಿ ವಿಶೇಷವಾದ ಭಯೋತ್ಪಾದನಾ ನಿಗ್ರಹ ಕಮಾಂಡೋವನ್ನು ರಚಿಸಲು ನಾವು ಉದ್ದೇಶಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಅಮಾಯಕ ಯುವಕನ ಕೊಲೆ ಆಗಿದೆ, ಈ ಘಟನೆ ನೋಡಿ ಮನಸ್ಸಿಗೆ ಶಾಂತಿ ಇರಲಿಲ್ಲ. ಉಗ್ರ ನಿಗ್ರಹಕ್ಕಾಗಿ ವಿಶೇಷ ಸ್ಕ್ವಾಡ್ ರಚಿಸಲಾಗುತ್ತದೆ. ಅದರ ಸ್ವರೂಪವನ್ನು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಹಿಂಸೆಯ ಮೂಲಕ ದ್ವೇಷ ಬಿತ್ತುವ ಹುನ್ನಾರದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ. ಇದು ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲ ಕೇರಳ ರಾಜಸ್ಥಾನದಲ್ಲೂ ಇಂಥ ಕೃತ್ಯಗಳು ನಡೆದಿವೆ. ಇಂತಹ ಕೃತ್ಯಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗುವುದು. ಜಾರಿಯಲ್ಲಿರುವ ಕಾನೂನಿನ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿಶೇಷವಾಗಿ ಕಾನೂನು ಕ್ರಮ ಜರಗಿಸಲು ಚಿಂತನೆ ಇದೆ ಎಂದರು.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸಂಜೆ ಮಾತುಕತೆ ನಡೆಸಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!