Wednesday, August 17, 2022
spot_img
Homeರಾಜ್ಯಪ್ರವೀಣ್‌ ಹತ್ಯಾ ಪ್ರಕರಣದ ತನಿಖೆ ಎನ್‌ಐಎಗೆ

ಪ್ರವೀಣ್‌ ಹತ್ಯಾ ಪ್ರಕರಣದ ತನಿಖೆ ಎನ್‌ಐಎಗೆ

ಬೆಂಗಳೂರು: ಸುಳ್ಯದ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯಾ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೊಪ್ಪಿಸಲು ಸರಕಾರ ತೀರ್ಮಾನಿಸಿದೆ.
ಇಂದು ಉನ್ನತ ಪೊಲೀಸ್‌ ಅಧಿಕಾರಿಗಳೊಂದಿಗೆ ಇತ್ತೀಚೆಗಿನ ಕೆಲವು ದಿನಗಳಿಂದ ನಡೆಯುತ್ತಿರುವ ಹಿಂಸಾ ಘಟನೆಗಳ ಕುರಿತು ಮಹತ್ವದ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಎನ್‌ಐಎ ತನಿಖೆಯ ನಿರ್ಧಾರ ಕೈಗೊಂಡಿದ್ದಾರೆ. ಡಿಜಿ ಐಜಿಪಿ ಪ್ರವೀಣ್‌ ಸೂದ್‌ ಮತ್ತಿತರ ಉನ್ನತಾಧಿಕಾರಿಗಳು ಇಂದಿನ ಸಭೆಯಲ್ಲಿ ಭಾಗವಹಿಸಿದ್ದರು.
ಪ್ರವೀಣ್‌ ಹತ್ಯಾ ಪ್ರಕರಣದ ತನಿಖೆಯನ್ನು ಎನ್‌ಐಎಗೊಪ್ಪಿಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಕೇಂದ್ರಕ್ಕೆ ಪತ್ರ ಬರೆದಿದ್ದರು.
ಭಯೋತ್ಪಾದನೆ ಕೃತ್ಯಗಳ ತನಿಖೆ ನಡೆಸುವ ಎನ್‌ಐಎ ಕರಾವಳಿಯಲ್ಲಿ ನಡೆಯುತ್ತಿರುವ ಹಿಂಸಾಚಾರದ ಮೂಲವನ್ನು ಬಯಲಿಗೆಳೆಯುವ ನಿರೀಕ್ಷೆಯಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!